Department of Agriculture ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2025 ರ ಅಂಗವಾಗಿ ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಪ್ರತಿ ಸ್ಪರ್ಧಿಗೆ ಒಂದೇ ತಿನಿಸು ಸಿಹಿ ಅಥವಾ ಖಾರ (ಸಸ್ಯಹಾರ ತಿನಿಸುಗಳು ಮಾತ್ರ) ತಯಾರಿಸುವ ಅವಕಾಶವಿರುತ್ತದೆ.
ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಡಿ.6 ರಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಗ್ಗೆ 9.30ಕ್ಕೆ ಪ್ರದರ್ಶಿಸುವುದು. ತಯಾರಿಸಿದ ತಿನಿಸುಗಳ ಪ್ರದರ್ಶನ, ಬಳಸಿದ ಸಾಮಗ್ರಿಗಳು, ತೋರಿಕೆ, ರುಚಿ, ಸುವಾಸನೆ, ಪೌಷ್ಠಿಕತೆಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. 2023-24ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ದೆಯಲ್ಲಿ ವಿಜೇತರಾದವರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
ಸಸ್ಯಹಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ, ಮತ್ತು ತೃತೀಯ ಬಹುಮಾನವಾಗಿ ಖಾರ ಅಥವಾ ಸಿಹಿ ತಿನಿಸಿಗೆ ತಲಾ ರೂ.5000/-, 3000/- ಹಾಗೂ 2000/- ಬಹುಮಾನವಿರುತ್ತದೆ.
ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ.
Department of Agriculture ಅಭ್ಯರ್ಥಿಗಳು ತಮ್ಮ ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.4 ರೊಳಗೆ ಇ-ಮೇಲ್ ವಿಳಾಸ dagrshi@rediffmail.com ಅಥವಾ ಖುದ್ದಾಗಿ/ಪೋಸ್ಟ್ ಮುಖಾಂತರ ಶಿವಮೊಗ್ಗ ಜಂಟಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ವಿಳಾಸಕ್ಕೆ ಕಳುಹಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು, ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ಧರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿ, ದೂ.ಸಂ.: 08182-222635 ನ್ನು ಸಂಪರ್ಕಿಸಬಹುದು.