Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಶಿವಮೊಗ್ಗ ಶಾಖೆ ಆಶ್ರಯದಲ್ಲಿ ಬಿ.ಬೀರನಹಳ್ಳಿಯ ಮಾರುತಿ ಪ್ರೌಢಶಾಲೆಯಲ್ಲಿ ಪ್ರೌಢಹಂತದಲ್ಲಿ ಆಗುವ ದೈಹಿಕ ಬದಲಾವಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣಕುಮಾರ್ ಅವರು ಶಾಲೆ ಮೂಲಸೌಕರ್ಯಕ್ಕೆ 5000 ರೂ. ದೇಣಿಗೆ ನೀಡಿದರು.
ಎಫ್‌ಪಿಎಐ ವೈದ್ಯಾಧಿಕಾರಿ ಡಾ. ಮೋಕ್ಷಾ ಅವರು ಮಕ್ಕಳಿಗೆ ಉಪನ್ಯಾಸ ನೀಡಿ, ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವ ಅವಧಿಯಾಗಿದೆ. ಆಗಾಗ ನಿಮ್ಮ ದೇಹದಲ್ಲಿ ಬದಲಾವಣೆಯನ್ನು ನೀವು ಗಮನಿಸಬಹುದು. ಎತ್ತರದಲ್ಲಿ ಹೆಚ್ಚಳ, ದೇಹದಲ್ಲಿ ಆಕಾರ ಬದಲಾವಣೆ, ಧ್ವನಿ ಬದಲಾವಣೆ ಆಗುತ್ತದೆ. ದೇಹದಲ್ಲಿ ಆಗುವ ಅನೇಕ ತ್ವರಿತ ಬದಲಾವಣೆ ಬಗ್ಗೆ ಹೆಚ್ಚು ಆಲೋಚನೆ ಮಾಡದೆ ಇದೊಂದು ನೈಸರ್ಗಿಕ ಪ್ರಕ್ರಿಯೆ ಎಂದರು.
Rotary Club Shimoga ಶಾಲಾ ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು. 90ಕ್ಕೂ ಹೆಚ್ಚು ಮಕ್ಕಳು ಕಾರ್ಯಗಾರದ ಸದುಪಯೋಗ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಉಚಿತ ಔಷಧ ನೀಡಲಾಯಿತು. 25ಕ್ಕೂ ಹೆಚ್ಚು ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡರು.
ರೋಟರಿ ಕ್ಲಬ್ ಧರ್ಮೇಂದ್ರ ಸಿಂಗ್, ಗೀತಾ ಜಗದೀಶ್, ರಾಜಶ್ರೀ ಬಸವರಾಜ್, ಶುಭ ಚಿದಾನಂದ್, ಜೆ.ಪಿ.ಚಂದ್ರು, ಸಂತೋಷ್, ಮಾರುತಿ ಪ್ರೌಢಶಾಲೆ ಮುಖ್ಯಶಿಕ್ಷಕ ರಾಮಕೃಷ್ಣ, ಕಾರ್ಯಕ್ರಮದಲ್ಲಿ ಎಫ್‌ಪಿಎಐ ಸಿಬ್ಬಂದಿ, ಉಪಸ್ಥಿತರಿದ್ದರು.
Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ
Date: