Wednesday, November 27, 2024
Wednesday, November 27, 2024

Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ

Date:

Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಅಲ್ಲಮ ಪ್ರಭು ಮೈದಾನದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 10*6 ಅಡಿ ಅಳತೆಯ ಮುದ್ರಿತ ಸಂವಿಧಾನ ಪೀಠಿಕೆಯನ್ನು ಪ್ರತಿಷ್ಟಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ವೈವಿಧ್ಯಮಯವಾದ ಭಾರತ ದೇಶದಲ್ಲಿ ಯಾವುದೇ ದ್ವೇಶ, ವೈಷಮ್ಯವಿಲ್ಲದೆ, ಎಲ್ಲರೂ ಏಕತೆ, ಭಾವೈಕ್ಯತೆ, ಸಮಗ್ರತೆಯಿಂದ ಬದುಕಲು ಅನುವಾಗುವಂತಹ ಸಂವಿಧಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ್ದಾರೆಂದು ಸ್ಮರಿಸಿದರು.

Constitution Day ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನವಿಲ್ಲದೆ ಪ್ರಜಾಪ್ರಭುತ್ವವಿಲ್ಲ,ಸಂವಿಧಾನವು ನಿಮಗೆ ಹಕ್ಕುಗಳನ್ನು ಒದಗಿಸುತ್ತದೆ, ಅವುಗಳನದನಯ ಸರಿಯಾಗಿ ಬಳಸಿಕೊಳ್ಳಿ. ಸಂವಿಧಾನದ ಮೂಲಧ್ಯೇಯ ಎಲ್ಲರಿಗೂ ಒಂದೇ ಕಾನೂನು, ಸರ್ವ ಧರ್ಮ ಸಮನ್ವತೆ’ ಮುಂತಾದ ಧ್ಯೇಯವಾಕ್ಯಗಳನ್ನೊಳಗೊಂಡ ಫಲಕಗಳನ್ನು ಹಿಡಿದು ಅಲ್ಲಮ ಪ್ರಭು ಮೈದಾನಸಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು.

ಈ ವೇಳೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರವಿಕುಮಾರ್ , ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ...

Department of Social Welfare ನಮ್ಮ ಸಂವಿಧಾನದ ಪೀಠಿಕೆಯನ್ನ ನಾವೆಲ್ಲಾ ಪಾಲಿಸಿದರೆ ಸಂತೋಷ & ನೆಮ್ಮದಿ ಜೀವನ ಸಾಧ್ಯ- ಬಲ್ಕೀಷ್ ಬಾನು

Department of Social Welfare ಸಮಾನತೆ, ಸೌಹಾರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ,...