Saturday, December 6, 2025
Saturday, December 6, 2025

Dinesh Gundurao ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮ : ಸಚಿವ ದಿನೇಶ್ ಗುಂಡೂರಾವ್

Date:

Dinesh Gundurao ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕುಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‌ಗಳನ್ನು ಮಂಜೂರು ಮಾಡಲಾಗಿದ್ದು, ಜನವರಿ ಮಾಹೆಯಿಂದಲೇ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಅವರು ಇಂದು ಭದ್ರಾವತಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ 340 ಆರೋಗ್ಯ ಕೇಂದ್ರಗಳಿಗೆ ಹೊಸ ಅಂಬುಲೆನ್ಸ್ಗಳನ್ನು ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಅಂಬುಲೆನ್ಸ್ಗಳ ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದರು.
2 ದಿನಗಳ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಸಾಗರ, ಸೊರಬ, ಭದ್ರಾವತಿ ಹಾಗೂ ಶಿವಮೊಗ್ಗ ತಾಲೂಕುಗಳ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಲಾಗಿದ್ದು, ಅಗತ್ಯವಿರುವ ಬೇಡಿಕೆಗಳ ಪೂರೈಕೆಗೆ ತುರ್ತು ಹಾಗೂ ಆದ್ಯತೆಯನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಗರ ತಾಲೂಕಿನ ಮಂಗನಕಾಯಿಲೆ ಬಾದಿತ ಅರಳಗೋಡು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಜನರ ಅವಹಾಲುಗಳನ್ನು ಆಲಿಸಲಾಗಿದ್ದು, ಈ ಸಂಬAಧ ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ಯಾವುದೇ ಕಾಯಿಲೆ ಬರುವುದಕ್ಕೆ ಮುನ್ನ ಅವುಗಳ ನಿಯಂತ್ರಣ ಕ್ರಮಕೈಗೊಳ್ಳುವುದು ಜಾಣತನ ಎನಿಸುತ್ತದೆ. ಆದ್ದರಿಂದ ಸ್ಥಳೀಯ ವೈದ್ಯಾಧಿಕಾರಿಗಳು ಈ ಕಾಯಿಲೆ ಉಲ್ಬಣಗೊಳ್ಳುವುದಕ್ಕೆ ಮುನ್ನವೇ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಇಲಾಖೆಯಲ್ಲಿ ಕೊರತೆ ಇರುವ ಕ್ಷೇತ್ರವ್ಯಾಪ್ತಿಯ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂಧಿಗಳ ನೇಮಕಕ್ಕೆ ಶೀಘ್ರ ಕ್ರಮ ವಹಿಸಲಾಗುವುದು. ಈ ಹುದ್ದೆಗಳು ಬಹಳ ದಿನಗಳಿಂದ ಖಾಲಿ ಇದ್ದು, ಅವುಗಳನ್ನು ತ್ವರಿತವಾಗಿ ಭರ್ತಿಗೊಳಿಸಲು ಗಮನಹರಿಸಲಾಗುವುದು ಎಂದರು.
ಸೊರಬ ತಾಲೂಕಿನ ಚಂದ್ರಗುತ್ತಿ ಮತ್ತು ಕೋಣಂದೂರು ಗ್ರಾಮಗಳಲ್ಲಿ ಆರೋಗ್ಯ ಇಲಾಖೆಯ ಸುಸಜ್ಜಿತ ಕಟ್ಟಡವಿದೆ. ಅಗತ್ಯವಾಗಿರುವ ಸಿಬ್ಬಂಧಿ ಹಾಗೂ ಮೂಲಭೂತ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸಾಗರ ಮತ್ತು ಭದ್ರಾವತಿ ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಭದ್ರಾವತಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದರು.
ಶಿಶು ಮರಣ ಪ್ರಮಾಣ ನಿಯಂತ್ರಿಸುವಲ್ಲಿ ತಾಯಿ ಮತ್ತು ಮಗುವಿನ ಆರೈಕೆಗೆ ಗಮನಹರಿಸಬೇಕಾಗಿರುವುದು ಅಗತ್ಯವಾಗಿದ್ದು,, ಈಗಾಗಲೇ ಜಿಲ್ಲೆಯ ಸಾಗರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪ್ರತ್ಯೇಕ ತಾಯಿ-ಮಗುವಿನ ಆಸ್ಪತ್ರೆ ಇದ್ದು, ಕಾರ್ಯಪ್ರವೃತ್ತವಾಗಿವೆ ಎಂದರು.
Dinesh Gundurao ಡೇಕೇರ್ ಫಿಸಿಯೋಥೆರಪಿ ಕೇಂದ್ರಗಳನ್ನು ರಆಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆರಂಭಿಸಲಾಗುವುದು. ಜಿಲ್ಲೆಯಲ್ಲಿ ಅಂಧತ್ವ ಮುಕ್ತವನ್ನಾಗಿಸಲು ವಿಶೇಷವಾಗಿ ಜಿಲ್ಲೆಯಲ್ಲಿ ವಿಶೇಷ ಆಂದೋಲನವನ್ನು ಆರಂಭಿಸಲಾಗುತ್ತಿದ್ದು, ಅದರ ವ್ಯವಸ್ಥಿತ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ಸರ್ಕಾರದಿಂದ ಒದಗಿಸಲಾಗುವುದು. ಈ ಆಂದೋಲನದಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರೀಕರಿಗೂ ಉಚಿತ ನೇತ್ರತಪಾಸಣೆ, ಚಿಕಿತ್ಸೆ ಮತ್ತು ಸಲಕರಣೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಆಶಾಕಿರಣ ಎಂಬ ಯೋಜನೆ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಇದ್ದು, ಅದನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದರು.
ಈಲ್ಲೆಯ ಖಾಸಗಿ ಸ್ತ್ರೀರೋಗ ಮತ್ತು ಪ್ರಸೂತಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರ ಶಸ್ತçಚಿಕಿತ್ಸೆಗಳು ಹೆಚ್ಚಾಗಿವೆ. ಇವುಗಳನ್ನು ನಿಯಂತ್ರಿಸಿ, ಸಹಜ ಹೆರಿಗೆ ಆದ್ಯತೆ ನೀಡುವಂತೆ ಪ್ರಸೂತಿ ವೈದ್ಯರಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಶೇ.,೭೦ರಷ್ಟಿರುವ ಆಪರೇಶನ್‌ಗಳ ಪ್ರಮಾಣ ಶೇ.೨೫ಕ್ಕೆ ಇಳಿಸುವಂತೆಯೂ ಸಲಹೆ ನೀಡಲಾಗಿದೆ ಎಂದರು.
ಈಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ತಾವು ರೋಗಿಗಳಿಗೆ ನೀಡುವ ಚಿಕಿತ್ಸೆಗೆ ವಿಧಿಸುತ್ತಿರುವ ದರವನ್ನು ಜನಸಾಮಾನ್ಯರಿಗೆ ಕಾಣುವಂತೆ ದರಪಟ್ಟಿ ಪ್ರದರ್ಶಿಸಬೇಕು. ತಪ್ಪಿದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಅಂತಹ ಆಸ್ಪತ್ರೆಗಳ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಸಾಗರ ತಾಲೂಕಿನ ಆಯ್ದ ಒಂದು ಪ್ರದೇಶದಲ್ಲಿ ಮಾತ್ರವೇ ಕಂಡುಬರುವ ಹಂದಿಗೋದು ಕಾಯಿಲೆಗೆ ವೈಜ್ಞಾನಿಕ ಅಧ್ಯಯನ ನಡೆಸಿ, ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೂಡಲೇ ವಿಸ್ತೃತ ವರದಿ ನೀಡುವಂತೆ ಆರೋಗ್ಯ ಇಲಾಖಾ ಆಯುಕ್ತ ಕೆ.ಬಿ.ಶಿವಕುಮಾರ್ ಅವರಿಗೆ ಸೂಚಿಸಿದರು.
ತಜ್ಞವೈದ್ಯರ ನೇಮಕ, ಫಾರ್ಮಾಸಿಸ್ಟ್ಗಳ ನೇಮಕ, ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ವೈದ್ಯರ ಹಾಜರಾತಿ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದ ಅವರು, ಮಧುಮೇಹ ಮತ್ತು ರಕ್ತದೊತ್ತಡದಿಂದಬಾದಿತರಾಗಿರುವವರ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅವರ ಮನೆಮನೆಗೆ ಔಷಧಗಳನ್ನು ತಲುಪಿಸಲು ಉದ್ಧೇಶಿಸಲಾಗಿದೆ. ಜನರ ಆರೋಗ್ಯ ಹದಗೆಡುವ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಈ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ನಕಲಿ ವೈದ್ಯರು ಹಾಗೂ ಆಯುಷ್ ವೈದ್ಯರಾಗಿದ್ದು, ಆಲೋಪತಿ ಸೇವೆ ಒದಗಿಸುತ್ತಿರುವ ವೈದ್ಯರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...