Minority Welfare Department Shivamogga ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ. 6.00 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Minority Welfare Department Shivamogga ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ sevasindhu.karnataka.gov.in ಮೂಲಕ ದಿನಾಂಕ: 25/12/2024 ರೊಳಗಾಗಿ ಸಲ್ಲಿಸಿ, ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದುಕೊಂಡು, ಅರ್ಜಿಯೊಂದಿಗೆ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.
Minority Welfare Department Shivamogga ಬಿ.ಇಡಿ/ಡಿ.ಇಡಿ ಅಧ್ಯಯನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರೋತ್ಸಾಹಧನ ಪ್ರಕಟಣೆ
Date: