Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ಜರುಗಲಿದೆ. ಜನಪದ ವಿದ್ವಾಂಸರಾದ ಗೋ.ರು.ಚನ್ನಬಸಪಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ವೈಭವದಿಂದ ನಡೆಯಲಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ
ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
Kannada Sahitya Sammelana ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ಸಮ್ಮೇಳನದ ಅವಧಿಯಲ್ಲಿ ಕನ್ನಡಿಗರು ತಮ್ಮ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಮನವಿ ಮನವಿ ಮಾಡಿಕೊಂಡಿದೆ.
