Congress Guarantee Scheme ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯ ಅಧಿವೇಶನದಲ್ಲಿ ಹೇಳಿದ್ದಾರೆ.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ.
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ.
Congress Guarantee Scheme ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಿದರು.