Thursday, December 19, 2024
Thursday, December 19, 2024

Byrathi Suresh ಗಾಜನೂರು ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆಅರಣ್ಯ ಇಲಾಖೆ ನಿರಾಕ್ಷೇಪಣೆ ಪತ್ರಕ್ಕೆ ಪ್ರಯತ್ನ-ಸಚಿವ ಭೈರತಿ ಸುರೇಶ್

Date:

Byrathi Suresh ಬೆಳಗಾವಿ ಸುವರ್ಣಸೌಧ,ಡಿ.13 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.

ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನಗೆ ಅವರು ಉತ್ತರಿಸಿದರು.

ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂ.ಎಲ್.ಡಿ, 1996ರಲ್ಲಿ 13.38 ಎಂ.ಎಲ್.ಡಿ ಹಾಗೂ 2009 ರಲ್ಲಿ 57 ಎಂ.ಎಲ್.ಡಿ ಸೇರಿ ಒಟ್ಟು 84 ಎಂ.ಎಲ್.ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬAಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದರು.

Byrathi Suresh ಶಿವಮೊಗ್ಗ ನಗರದಲ್ಲಿ ಶೇ.74 ರಷ್ಟು ಒಳಚರಂಡಿ ವ್ಯವಸ್ಥೆ ಇದೆ. ರೂ.115 ಕೋಟಿ ವೆಚ್ಚದಲ್ಲಿ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ, ಏರೇಟೆಡ್ ಲಗೂನ್ ತಂತ್ರಜ್ಞಾನ ಆಧರಿಸಿ 35.58 ಎಂ.ಎಲ್.ಡಿ ತ್ಯಾಜ್ಯ ನೀರು ಶುದ್ದೀಕರಣ ಘಟಕ, 03 ವೆಟ್‌ವೆಲ್, 262 ಕಿ.ಮೀ ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ನಿರ್ಮಿಸಲಾಗಿದೆ. ಅಮೃತ್ ಯೋಜನೆಯಡಿ ರೂ.58 ಕೋಟಿ ಹಾಗೂ ರೂ.7 ಕೋಟಿ ಹೆಚ್ಚುವರಿ ಅನುದಾನದಡಿ ಮಹಾನಗರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗೃಹ ಸಂಪರ್ಕಿತ ಒಳಚರಂಡಿ ಕೊಳವೆ ಮಾರ್ಗ, ಹಳೆ ಕೊಳವೆ ಮಾರ್ಗಗಳ ಪುನರುಜ್ಜೀವನ, 4 ವೆಟ್‌ವಲ್, 6 ಪಂಪಿAಗ್ ಮೆಷನರಿ, ಡಿ.ಜಿ. ರೂಮ್, ಡಿ.ಜೆ.ಸೆಟ್ ಮತ್ತು ಟ್ರಾನ್ಸ್ ಫಾರ್ಮರ್ ಸಬ್ ಸ್ಟೇಷನ್, 11 ಕೆ.ವಿ. ಎಕ್ಸ್ ಪ್ರೆಸ್ ಫೀಡರ್ ವಿದ್ಯುತ್ ಲೈನ್, 5.13 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರಿನ ಶುದ್ದೀಕರಣ ಘಟಕ ನಿರ್ಮಿಸಲಾಗಿದೆ. ಈ ಎಲ್ಲಾ ಕಾಮಗಾರಿಗಳು ಸುಸ್ಥಿತಿಯಲ್ಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ನಗರದಲ್ಲಿ ಹಾದುಹೋಗಿರುವ ತುಂಗಾ ನದಿಗೆ ಕೊಳಚೆ ನೀರು ಸೇರೆದಂತೆ ತಡೆಯಲು ಒಳಚರಂಡಿ ವ್ಯವಸ್ಥೆಯಲ್ಲಿನ ಮಿಸಿಂಗ್ ಲಿಂಕ್ಸ್ ಸ್ಥಳಗಳಲ್ಲಿಯೂ ರಾಷ್ಟಿçÃಯ ಹಸಿರು ನ್ಯಾಯಮಂಡಳಿಯ ರೂ.40 ಕೋಟಿ ಅನುದಾನದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸಿ, ತ್ಯಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸುವುದಾಗಿ ಸಚಿವ ಬಿ.ಎಸ್.ಸುರೇಶ್ ಹೇಳಿದರು.

ಮಹಾನಗರಗಳಿಗೆ ರೂ.2000 ಕೋಟಿ ಅನುದಾನ:
ಸರ್ಕಾರ ರಾಜ್ಯ ಹಣಕಾಸು ನಿಗಮದಿಂದ ಬೃಹತ್ ಬೆಂಗಳೂರು ಸೇರಿ ಇತರೆ 10 ಮಹಾನಗರ ಪಾಲಿಕೆಗಳಿಗೆ ಒಟ್ಟು ರೂ.2000 ಕೋಟಿ ಅನುದಾನ ನೀಡಿದೆ. ಇದರಲ್ಲಿ ಶಿವಮೊಗ್ಗ ನಗರಕ್ಕೆ ರೂ.140 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ಸದನದಲ್ಲಿ ಮಾಹಿತಿ ನೀಡಿದರು.
ಶಾಸಕ ಚನ್ನಬಸಪ್ಪ ನವರು ರಾಜ್ಯ ಹಣಕಾಸು ನಿಗಮದಿಂದ ನೀಡಿದ ಅನುದಾನದಲ್ಲಿ ಶೇ.20 ರಷ್ಟು ಮಾತ್ರ ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶವಿದೆ. ಈ ಮಿತಿಯನ್ನು ಸಡಿಲಗೊಳಿಸಿ ಹೆಚ್ಚಿನ ಅನುದಾನವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಬಳಸಿಕೊಳ್ಳಲು ಸರ್ಕಾರ ಅನುಮತಿ ನೀಡುವಂತೆ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashvani Bhadravati ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿತಾಣಗಳ ಚಿತ್ರ ಪ್ರದರ್ಶನ. ಪ್ರವಾಸೋದ್ಯಮಕ್ಕೆ ಬೆಂಬಲ- ಎನ್.ಹೇಮಂತ್

Akashvani Bhadravati ಆಕಾಶವಾಣಿ ಭದ್ರಾವತಿ 60ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ...

Klive Special Article ಕನ್ನಡ – ಒಂದಷ್ಟು ಆತಂಕಗಳು

Klive Special Article ಮತ್ತೊಮ್ಮೆ ಕನ್ನಡದ ನುಡಿ ಜಾತ್ರೆ ಬಂದಿದೆ ....

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತದೆ- ಸಂಸದ ರಾಘವೇಂದ್ರ

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸದ್ಯಕ್ಕೆ ಬಿ...