Thursday, January 23, 2025
Thursday, January 23, 2025

NSS Camp Shivamogga ಎನ್ ಎಸ್ ಎಸ್ ಸೇರಿದ ಮೇಲೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನ- ಡಾ.ಪರಿಸರ ನಾಗರಾಜ್

Date:

NSS Camp Shivamogga ಶಿವಮೊಗ್ಗ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕರ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವಲ್ಲಿ ಎನ್‌ಎಸ್‌ಎಸ್ ಪಾತ್ರ ಬಹಳ ಮುಖ್ಯವಾದದ್ದು ಎಂದು ಕುವೆಂಪು ವಿವಿ ನಿಕಟ ಪೂರ್ವ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಪರಿಸರ ನಾಗರಾಜ್ ಹೇಳಿದರು.
ಅವರು ಇಂದು ಆಚಾರ್ಯ ತುಳಸಿ ರಾಷ್ಟಿçÃಯ ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎನ್‌ಎಸ್‌ಎಸ್ ಬದುಕು ಕಟ್ಟಿಕೊಡುವಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಸಹಾಯಕವಾಗುತ್ತದೆ. ಎನ್‌ಎಸ್‌ಎಸ್ ಸೇರಿದ ಮೇಲೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶಗಳು ಕೂಡ ಲಭಿಸುತ್ತವೆ. ಆಗಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಬೇಕು ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ಎನ್‌ಎಸ್‌ಎಸ್ ಧೈರ್ಯವನ್ನು, ಆತ್ಮಬಲವನ್ನು ಹೆಚ್ಚಿಸುತ್ತದೆ. ಅದರಲ್ಲೂ ಗ್ರಾಮೀಣ ಪ್ರದೇಶದವರಿಗೆ ಹೊಸ ಲೋಕವನ್ನೇ ಸೃಷ್ಟಿ ಮಾಡುತ್ತದೆ. ಸಾಮರಸ್ಯ, ಸೇವಾ ಭಾವನೆಯನ್ನು ಕಲಿಸುತ್ತದೆ ಎಂದರು.
NSS Camp Shivamogga ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಮಾತನಾಡಿ, ಈಗಾಗಲೇ ವಿದ್ಯಾರ್ಥಿಗಳಲ್ಲಿ ಎನ್‌ಎಸ್‌ಎಸ್ ಗುಣಗಳು ಇದ್ದೇ ಇರುತ್ತವೆ. ಅವುಗಳನ್ನು ಮತ್ತಷ್ಟು ವಿಸ್ತರಿಸಕೊಳ್ಳಬೇಕು ಅಷ್ಟೇ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಜೋತುಬೀಳದೆ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಜಗತ್ತು ತಲ್ಲಣಗೊಳ್ಳುತ್ತಿರುವ ವಿಷಾಧದ ಈ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಎಂಬುವುದು ಜೀವ ಜಲ ನೀಡುತ್ತದೆ. ಲವಲವಿಕೆ ಮತ್ತು ಜೀವನ ಪ್ರೀತಿಯನ್ನು ಬೆಳೆಸಿಕೊಳ್ಳಿ ಎಂದರು.
ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಕೆ.ಎಂ. ನಾಗರಾಜ್ ಮಾತನಾಡಿ, ಎನ್‌ಎಸ್‌ಎಸ್‌ನಿಂದ ಸಾವಿರಾರು ವಿದ್ಯಾರ್ಥಿಗಳ ಬದುಕು ಹಸನಾಗಿದೆ. ಇದು ಉದ್ಯೋಗ ಪಡೆದುಕೊಳ್ಳುವಲ್ಲಿಯೂ ಸಹಾಯಕವಾಗುತ್ತದೆ. ಕೌಶಲ್ಯವನ್ನು ಕಲಿಸುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ನೀವು ಎನ್‌ಎಸ್‌ಎಸ್ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಿ. ಜೊತೆಗೆ ಓದನ್ನು ಕೂಡ ಮರೆಯಬೇಡಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ. ಮಮತಾ ಪಿ.ಆರ್. ಮಾತನಾಡಿ, ಎನ್‌ಎಸ್‌ಎಸ್ ಸಂಸ್ಕಾರ ಕಲಿಸುತ್ತದೆ. ಪೋಷಕರ ಶ್ರಮ ವ್ಯರ್ಥವಾಗದಂತೆ ಚೆನ್ನಾಗಿ ಅಭ್ಯಾಸ ಮಾಡಿ, ಶ್ರದ್ಧೆಯಿರಲಿ. ನಮ್ಮ ಕಾಲೇಜು ಆಡಳಿತ ಮಂಡಳಿ ಪಠ್ಯೇತರ ಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ಕೊಡುತ್ತದೆ. ಈ ಕಾಲೇಜಿನಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದಕ್ಕೆ ಎನ್‌ಎಸ್‌ಎಸ್ ಕೂಡ ಕಾರಣ ಎಂದರು.
ಅನುಜ್ಞಾ ಸ್ವಾಗತಿಸಿದರು. ಜ್ಞಾನಿ ವಂದಿನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

M. B. Patil ಉದ್ಯಮ ದಿಗ್ಗಜರ ಸಂಗಡ ಸಚಿವ ಎಂ.ಬಿ.ಪಾಟೀಲ್ ಸಮಾಲೋಚನೆ

• ರಾಜ್ಯದಲ್ಲಿ ಹೂಡಿಕೆ ಹೆಚ್ಚಳ, ವಹಿವಾಟು ವಿಸ್ತರಣೆಗೆ ಐಟಿಸಿ, ರಿನ್ಯೂ ಪವರ್‌,...

Shivamogga Zilla Panchayat ಜನವರಿ 25. ರಾಷ್ಟ್ರೀಯ ಮತದಾರರ ದಿನಾಚರಣೆ

Shivamogga Zilla Panchayat  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ...

Kuvempu University ಮಣ್ಣಿನಮಗನ ಮಗಳು ಪೂರ್ಣಿಮಾಗೆ ಮೂರು ಚಿನ್ನದ ಪದಕ

Kuvempu University ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೌಡರಗೆರೆಯ ಜಿ.ಎಸ್.ಪೂರ್ಣಿಮಾ ೨೦೨೩-೨೪ನೇ...