Vishveshvaraya Iron and Steel Plant ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರದ ಪರಿಸರ ಮಾಸಾಚರಣೆ-2024ರ ಸಮಾರೋಪ ಸಮಾರಂಭ ಭದ್ರಾ ಅತಿಥಿಗೃಹದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಕೆ.ಎಸ್.ಪಿ.ಸಿ.ಬಿ, ಪ್ರಾದೇಶಿಕ ಕಛೇರಿ ಶಿವಮೊಗ್ಗದ ಪರಿಸರ ಅಧಿಕಾರಿ ಶ್ರೀ ವಿ. ರಮೇಶ್ ಅವರು ಉದ್ಘಾಟಿಸಿದರು.
ವಿಐಎಸ್‌ಎಲ್‌ನ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕ (ಸ್ಥಾವರ), ಶ್ರೀ ಮುತ್ತಣ್ಣ ಸುಬ್ಬರಾವ್, ಮಹಾಪ್ರಬಂಧಕ (ಪರಿಸರ ನಿರ್ವಹಣೆ ವಿಭಾಗ ಮತ್ತು ಸಿವಿಲ್ ಇಂಜಿನಿಯರಿಂಗ್), ವಿಐಎಸ್ ಎಲ್, ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಶ್ರೀಮತಿ ಕೆ. ಶಿಲ್ಪಾ, ಉಪ ಪರಿಸರ ಅಧಿಕಾರಿ ಇತರ ಗಣ್ಯರು ಉಪಸ್ಥಿತರಿದ್ದರು.
ಪರಿಸರದ ಬಗ್ಗೆ ಕಾಳಜಿಯನ್ನು ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಬರೆಯುವುದು, ಪರಿಸರ ರಸಪ್ರಶ್ನೆ ಮತ್ತು ಘೋಷವಾಕ್ಯ ಬರೆಯುವ ಸ್ಪರ್ಧೆಗಳನ್ನ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಮತ್ತು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿ. ರಮೇಶ್ ‘ಹೆಚ್ಚು ಗಿಡಗಳನ್ನು ನೆಟ್ಟು, ವೈಜ್ಞಾನಿಕವಾಗಿ ತ್ಯಾಜ್ಯವನ್ನು ಬೇರ್ಪಡಿಸಿ ಮತ್ತು ವಿಲೇವಾರಿ ಮಾಡುವ ಮೂಲಕ ನಮ್ಮ ಪರಿಸರವನ್ನು ರಕ್ಷಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು’ ಎಂದು ಕರೆನೀಡಿದರು. ವಿಐಎಸ್‌ಎಲ್‌ನ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ ಅವರು ‘ಪ್ರತಿಯೊಬ್ಬ ಭಾರತೀಯನೂ ಒಂದು ಮರವನ್ನು ನೆಟ್ಟು ರಕ್ಷಿಸುವ ಪ್ರತಿಜ್ಞೆ ಮಾಡಿದರೆ 140 ಕೋಟಿ ಮರಗಳನ್ನು ನೆಡಬಹುದು ಮತ್ತು ಅದು ಮಾಲೀನ್ಯವನ್ನು ತೊಡೆದುಹಾಕಲು ಮತ್ತು ಪರಿಸರ ಸಮಸ್ಯೆಗಳನ್ನು ತಗ್ಗಿಸಲು ಸಹಾಯ ಮಾಡುತ್ತದೆ’ ಎಂದು ಒತ್ತಿ ಹೇಳಿದರು.
Vishveshvaraya Iron and Steel Plant ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಶ್ರೀ ಕೆ.ಎಸ್. ಸುರೇಶ್ ಅವರು ‘ನಾವು ಹೆಚ್ಚು ಮರಗಳನ್ನು ನೆಡಬೇಕು, ಸುಸ್ಥಿರ ಅಭಿವೃದ್ಧಿಗಾಗಿ ಸೌರ, ಪವನ ಮುಂತಾದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅನ್ವೇಷಿಸಬೇಕು’ ಎಂದರು.
ಈ ಸಂದರ್ಭದಲ್ಲಿ ಎಲ್ಲಾ ವಿಜೇತರಿಗೆ ಸಸಿಗಳನ್ನು ವಿತರಿಸಲಾಯಿತು ಮತ್ತು ಪರಿಸರ ಮತ್ತು ಪ್ರಕೃತಿಯ ಕುರಿತಾದ ಮೊದಲ ದಿನದ ಕವರ್‌ಗಳು ಮತ್ತು ಮಿನಿಯೇಚರ್ ಸ್ಟಾö್ಯಂಪ್‌ಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಪ್ರಕೃತಿ ಕುರಿತಾದ ಹಾಡು ಮತ್ತು ಪ್ರಾರ್ಥನಾ ಗೀತೆಯನ್ನು ಶ್ರೀಮತಿ ತ್ರಿವೇಣಿ ಮತ್ತು ಶ್ರೀಮತಿ ಮಂಜುಶ್ರೀ ಸುಶ್ರಾವ್ಯವಾಗಿ ಹಾಡಿದರು. ಶ್ರೀ ವಿಕಾಸ್ ಬಸೇರ್, ಸಹಾಯಕ ಮಹಾಪ್ರಬಂಧಕರು (ಪರಿಸರ ಇಲಾಖೆ) ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀ ಮುತ್ತಣ್ಣ ಸುಬ್ಬರಾವ್ ಸ್ವಾಗತಿಸಿ, ಶ್ರೀ ಜಿ.ಹೆಚ್. ನಂದನ, ಕಿರಿಯ ಪ್ರಬಂಧಕ (ನಗರಾಡಳಿತ) ವಂದಿಸಿದರು. ಈ ಕಾರ್ಯಕ್ರಮವನ್ನು ಸೈಲ್-ವಿಐಎಸ್‌ಎಲ್ ನ ಪರಿಸರ ನಿರ್ವಹಣಾ ವಿಭಾಗವು ಆಯೋಜಿಸಿತ್ತು.