CM Siddharamaiah ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ನಮ್ಮ ಸರ್ಕಾರಕ್ಕೂ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಸಿದ್ದಾರೆ
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರು ಪ್ರತಿಕ್ರಿಯೆ ನೀಡುತ್ತಾ ಈ ವಿಷಯ ತಿಳಿಸಿದರು
ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿಗತಿ ಕುರಿತ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
CM Siddharamaiah ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇದರ ಸ್ಮರಣಾರ್ಥ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿಯಂಥವರ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.