Rotary Club Shimoga ಶೈಕ್ಷಣಿಕ ಪ್ರವಾಸವು ಮಕ್ಕಳಿಗೆ ವಿಶೇಷ ಮೌಲ್ಯಗಳನ್ನು ಕಲಿಸುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಶಾಲೆಯ ಮಕ್ಕಳಿಗೆ ಶಿಮುಲ್ ಡೈರಿಗೆ ಆಯೋಜಿಸಿದ್ದ ಶೈಕ್ಷಣಿಕ ಕ್ಷೇತ್ರ ಪ್ರವಾಸದಲ್ಲಿ ಮಾತನಾಡಿದರು.
ಮಕ್ಕಳಲ್ಲಿ ಒಗ್ಗಟ್ಟು ಸಹಬಾಳ್ವೆ ಮತ್ತು ಪರಸ್ಪರ ಸಂತೋಷ ಸಹಕಾರ ಹಂಚುವ ಭಾವನೆ ಹೆಚ್ಚುತ್ತದೆ. ಮಕ್ಕಳಿಗೆ ನಿತ್ಯದ ಶಾಲಾ ವಾತಾವರಣದಿಂದ ಹೊರಕರೆತಂದು ಆಕರ್ಷಣೀಯ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವುದರಲ್ಲಿ ಸಫಲವಾಗುತ್ತದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿಶೇಷವಾಗಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ಉಚಿತ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪೂರಕವಾದ ತರಬೇತಿ ನೀಡುತ್ತಿದೆ ಎಂದು ತಿಳಿಸಿದರು.
Rotary Club Shimoga ಡಿವಿಎಸ್ ಶಾಲೆಯ 80 ವಿದ್ಯಾರ್ಥಿಗಳು ಭೇಟಿ ನೀಡಿ ಡೈರಿಯಲ್ಲಿ ಉತ್ಪಾದಿಸುವ ವಿವಿಧ ಉತ್ಪನ್ನಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಇದರಿಂದ ವಿದ್ಯಾರ್ಥಿಗಳಿಗೆ ಹಾಲಿನ ಉತ್ಪಾದನೆಗಳ ಬಗ್ಗೆ ಅಮೂಲ್ಯ ಜ್ಞಾನ ಪಡೆದರು.
ಶಾಲೆಯ ಮಕ್ಕಳ ಜತೆ ಡಿವಿಎಸ್ ಶಾಲಾ ಶಿಕ್ಷಕರಾದ ಶ್ವೇತಾ, ಸಪ್ನಾ, ವೀಣಾ, ಪ್ರಭಾಕರ್, ಜಯಂತ್ ಅಶೋಕ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಬಿ.ವಿ.ಈಶ್ವರ್, ಸಹ ಕಾರ್ಯದರ್ಶಿ ಜಯಶೀಲ ಶೆಟ್ಟಿ ಹಾಗೂ ಖಜಾಂಚಿ ಬಸವರಾಜ್.ಬಿ ಉಪಸ್ಥಿತರಿದ್ದರು.