DVS College ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ವೈವಿಧ್ಯಮಯ ಆಹಾರ ಪದಾರ್ಥಗಳಿಂದ ಗಮನ ಸೆಳೆಯಿತು. ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಪಠ್ಯ ಚಟುವಟಿಕೆಗಳ ಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸುವ, ಕ್ರೀಯಾತ್ಮಕ ಆಲೋಚನೆ ವೃದ್ಧಿಸುವ ದೃಷ್ಟಿಯಿಂದ ಆಯೋಜಿಸುವ ಸ್ಪರ್ಧೆಗಳು ಉಪಯುಕ್ತ ಆಗಿರುತ್ತವೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಅಸಂತ ಸಿಕ್ವೇರ ಮಾತನಾಡಿ, ಇಂಧನರಹಿತ ಅಡುಗೆ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿರುವುದು ತುಂಬಾ ಸಂತಸದ ಸಂಗತಿ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಹೊಸ ಹೊಸ ರೀತಿ ಚಾಟ್ಸ್, ತಿಂಡಿ ತಿನಿಸುಗಳನ್ನು ತಯಾರಿಸಿದ್ದರು. ಆಸಕ್ತಿ ವಹಿಸಿ ವಿದ್ಯಾರ್ಥಿಗಳ ತಂಡಗಳು ವಿಶೇಷ ವಿಭಿನ್ನವಾಗಿ ಅಡುಗೆ ಸಿದ್ಧಪಡಿಸಿದ್ದರು. ತರಕಾರಿ, ಹಣ್ಣು, ಮಂಡಕ್ಕಿ, ಪಾನಿಪೂರಿ, ಸೊಪ್ಪು, ಬಿಸ್ಕಟ್ ಸೇರಿ ವಿವಿಧ ಬಗೆಯ ಅಡುಗೆಗೆ ಬೇಕಾಗುವ ವಸ್ತುಗಳನ್ನು ವಿದ್ಯಾರ್ಥಿಗಳು ತಂದಿದ್ದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.
DVS College ಇಂಧನರಹಿತ ಅಡುಗೆ ಸ್ಪರ್ಧೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಮೂರು ಗುಂಪುಗಳಾಗಿ ವಿಂಗಡಿಸಿ ಸ್ಪರ್ಧೆ ನಡೆಸಲಾಯಿತು. 8ನೇ ತರಗತಿ, 9ನೇ ತರಗತಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ನಡೆಸಲಾಯಿತು.
ತಿಂಡಿ ತಿನಿಸು ತಯಾರಿಕೆಗೆ ವಿದ್ಯಾರ್ಥಿಗಳಿಗೆ ಸ್ವಲ್ಪ ಸಮಯ ಅವಕಾಶ ನೀಡಲಾಗಿತ್ತು. ಫೋಟೊ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ನಂತರ ತೀರ್ಪುಗಾರರು ವಿದ್ಯಾರ್ಥಿಗಳ ಗುಂಪುಗಳು ತಯಾರಿಸಿದ್ದ ಅಡುಗೆ ರುಚಿ ಸವಿದು 8ನೇ, 9ನೇ ಹಾಗೂ 10ನೇ ತರಗತಿಯ ಪ್ರತಿ ವಿಭಾಗದಲ್ಲೂ ವಿಜೇತರನ್ನು ಆಯ್ಕೆ ಮಾಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಆಡಳಿತ ಮಂಡಳಿಯ ಹರೀಶ್.ಎಸ್., ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಸಿ.ಕೆ.ಶ್ರೀಧರ್, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
DVS College ಪಠ್ಯ ಚಟುವಟಿಕೆ ಜೊತೆ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿಸುವ ಕ್ರಿಯಾತ್ಮಕ ಆಲೋಚನೆ ವೃದ್ಧಿಸುವ ಸ್ಪರ್ಧೆಗಳು ಉಪಯುಕ್ತ- ಅಸಂತ ಸಿಕ್ವೆರಾ
Date: