Monday, May 4, 2026
Monday, May 4, 2026

CM Siddharamaiah ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371ಜೆ ಜಾರಿ ದಶಮಾನೋತ್ಸವ. ಕಲಬುರ್ಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ

Date:

CM Siddharamaiah ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಅವರು ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು

ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಕೇಳಿದಂತೆ, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಲಾಗಿವುದು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು.

371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ.

CM Siddharamaiah ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು.

ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...