Seema English School, Machenahalli 2024-25ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮವನ್ನು ಡಿ. 26 ಮತ್ತು 27 ರಂದು ಬೆಳಗ್ಗೆ 10 ಗಂಟೆಗೆ ಸೀಮಾ ಆಂಗ್ಲ ಶಾಲೆ, ಮಲ್ನಾಡ್ ಲೇಔಟ್ ಮಾಚೇನಹಳ್ಳಿ ಇಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪರವರು ನೆರವೇರಿಸುವರು. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ವಿಧಾನಸಭೆ ಶಾಸಕರಾದ ಬಿ.ಕೆ ಸಂಗಮೇಶ್ವರ ಮತ್ತು ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ಇವರ ಗೌರವ ಉಪಸ್ಥಿತಿ ಇರಲಿದ್ದು, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ಸಂಸದರು, ವಿಧಾನಸಭಾ, ವಿಧಾನಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು ಸದಸ್ಯರುಗಳು, ನಿದಿಗೆ ಗ್ರಾ.ಪಂ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ, ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಮಹಾನಗರಪಾಲಿಕೆ ಆಯುಕ್ತರು, ಅಧಿಕಾರಿಗಳು, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳುವರು.