Christmas Festival ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಬುಧವಾರ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಏಸುಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತರು ಸಡಗರ-ಸಂಭ್ರಮದಿಂದ ಆಚರಿಸಿದರು.
ಬೆಳಗ್ಗೆಯಿಂದಲೇ ಮಕ್ಕಳು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರೆ, ಮನೆಗಳಲ್ಲಿ ಕ್ರಿಸ್‌ಮಸ್ ಟ್ರೀ ರಚಿಸಿ ವಿದ್ಯುತ್ ದೀಪ ಮತ್ತು ವಿವಿಧ ಬಣ್ಣಗಳ ಹಾಳೆಗಳಿಂದ ಶೃಂಗರಿಸಿದ ದೃಶ್ಯ ಕಂಡುಬಂದಿತು.
ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್ನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಿ, ಚರ್ಚ್ನ ಮುಂಭಾಗದಲ್ಲಿ ನಿರ್ಮಿಸಿದ ಏಸುವಿನ ಜನ್ಮವೃತ್ತಾಂತ ಸಾರುವ ಗೋದಲಿ ಎಲ್ಲರ ಗಮನ ಸೆಳೆಯಿತು. ಕ್ರೈಸ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಕೇಕ್ ಮತ್ತು ಸಿಸಿ ಹಂಚುವ ಮೂಲಕ ಸಂತಸ ಹಂಚಿಕೊಂಡರು
Christmas Festival ಸಂತ ಸೆಬಾಸ್ಟಿಯನ್ ಚರ್ಚ್ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೊ ಧರ್ಮ ಸಂದೇಶ ನೀಡಿ, ಕ್ರಿಸ್‌ಮಸ್ ಹಬ್ಬ ಪ್ರೀತಿಯ ಸಂಕೇತವಾಗಿದೆ. ಜಾತಿ-ಮತ ತಾರತಮ್ಯವಿಲ್ಲದೇ ಸುಖ ಶಾಂತಿಯಿAದ ದೇಶೀಯ ಸಂಸ್ಕೃತಿಯಲ್ಲಿ ಬೆರೆತು ರಾಷ್ಟ್ರೀಯ ಏಕತೆಯನ್ನು ಉಂಟು ಮಾಡುತ್ತದೆ. ಅಂಧರಿಗೆ ದೃಷ್ಟಿದಾನ, ಶೋಷಿತರಿಗೆ ಸ್ವಾತಂತ್ರö್ಯ ನೀಡಲು ಏಸು ಕ್ರಿಸ್ತರು ನೀಡಿರುವ ಸಂದೇಶ ಪಾಲಿಸೋಣ, ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಬೇಕು. ನಾಡು ಸಮೃದ್ಧವಾಗಿರಬೇಕು ಎಂದು ಪ್ರಾರ್ಥಿಸೋಣ ಎಂದರು.
ಆನವಟ್ಟಿಯ ಕ್ರಿಸ್ತುರಾಜ ಆಶ್ರಮ, ಇಂಡುವಳ್ಳಿಯ ಚರ್ಚ್ ಸೇರಿದಂತೆ ತಾಲೂಕಿನ ಎಲ್ಲಾ ಚರ್ಚ್ಗಳಲ್ಲೂ ವಿಶೇಷ ಪ್ರಾರ್ಥನೆಗಳು ಜರುಗಿದವು. ಕ್ರೈಸ್ತರ ಮನೆ ಮುಂಭಾಗದಲ್ಲಿ ಏಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಕ್ರೈಸ್ತರು ಮಾತ್ರವಲ್ಲದೇ ಸರ್ವ ಧರ್ಮಿಯರು ಕ್ರಿಸ್‌ಮಸ್ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
Christmas Festival ಸೊರಬ ತಾಲ್ಲೂಕಿನಾದ್ಯಂತ ಕ್ರಿಸ್ಮಸ್ ಸಂಭ್ರಮ
Date: