Sri Adichunchanagiri Education Trust Shimoga ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ
ಗುರುಪುರದ ಬಿಜಿಎಸ್ ಶಾಲಾ ಆವರಣದಲ್ಲಿರುವ ಪುರಾತನಕಾಲದ ಶ್ರೀ ವೀರಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಧನುರ್ಮಾಸದ 11 ನೇ ದಿವಸದ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀ ವೀರ ಸೋಮೇಶ್ವರಸ್ವಾಮಿಗೆ, ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಯಿತು.
ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಮಹಾ ಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು.
Sri Adichunchanagiri Education Trust Shimoga ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ, ಶಾಲಾ, ಕಾಲೇಜಿನ ಪ್ರಾಂಶುಪಾಲರುಗಳು, ಶಿಕ್ಸಕರು,ಉಪನ್ಯಾಸಕರು,ವಿದ್ಯಾರ್ಥಿಗಳು, ಶ್ರೀ ಮಠದ ಸದ್ಭಕ್ತರು ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.