Central Armed Police Forces ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಜಾಲತಾಣ HTTPS://ONLINE.KSB.GOV.IN ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:03/01/2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ತಿಳಿಸಿದ್ದಾರೆ.
Central Armed Police Forces ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು.