Wednesday, December 17, 2025
Wednesday, December 17, 2025

Kuvempu ಶಿಕಾರಿಪುರದಲ್ಲಿ ಕುವೆಂಪು ಜನ್ಮದಿನ ವಿಶೇಷ. ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ನಾಟಕ ಸ್ಪರ್ಧೆ

Date:

Kuvempu ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನದ ಪ್ರಯುಕ್ತ ಡಿ.೨೮ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಪದವಿ ಹಾಗೂ ಬಿ.ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಹಾಗೂ ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವುಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ ಸ್ಪರ್ಧೆ ಆಯೋಜಿಸಲಾಗಿದ್ದು, ಸಹ್ಯಾದ್ರಿ ರಂಗತರಂಗ ಶಿವಮೊಗ್ಗ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಸ್ಪರ್ಧೆ ನಡೆಯಲಿದೆ. ಶಾಸಕ ಬಿ.ವೈ. ವಿಜಯೇಂದ್ರ ಸ್ಪರ್ಧೆ ಉದ್ಘಾಟಿಸಲಿದ್ದಾರೆ.
Kuvempu ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ನಾಟಕ ಪ್ರದರ್ಶಿಸಲಿವೆ. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ ರೂ. ೮,೦೦೦, ದ್ವಿತೀಯ ಬಹುಮಾನ ರೂ. ೬, ೦೦೦ ಮತ್ತು ತೃತೀಯ ಬಹುಮಾನ ರೂ. ೪,೦೦೦ ನಗದು ನೀಡಲಾಗುವುದು. ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ಸಹ್ಯಾದ್ರಿ ರಂಗತರಂಗ ದ ಗೌರವಾಧ್ಯಕ್ಷ ಕಾಂತೇಶ್ ಕದರಮಂಡಲಗಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...

Klive Special Article ಗೀತ ನೃತ್ಯಗಳ ಮೂಲಕ ಮನಸೆಳೆದ ಶ್ರೀಶಾರದಾ ಸಂಗೀತ- ನೃತ್ಯ ವಿದ್ಯಾಲಯದ ರಂಗ ಪ್ರಸ್ತುತಿ

Klive Special Article ವಿಜಯವಾಣಿ ಪತ್ರಿಕೆಯ ರವಿಕಾಂತ್ ಕುಂದಾಪುರ ವಾಟ್ಸಾಪ್ ಡೀಪಿಯಲ್ಲಿ...