Thursday, January 23, 2025
Thursday, January 23, 2025

Mathura Paradise ಶತಮಾನಗಳ ಗಾಯಕ್ಕೆ ಕವಿ ನೀಡುವ ಕಾವ್ಯದ ಮುಲಾಮೇ ಔಷಧ- ಶಿ.ಜು.ಪಾಶ

Date:

Mathura Paradise ಈ ಜಗತ್ತಿಗೆ ಈಗ ಕೋವಿ ಮತ್ತು ಕತ್ತಿಗೆ ಕವಿ ಮತ್ತು ಕಾವ್ಯದ ಜರೂರತ್ತಿದೆ. ಶತಶತಮಾನಗಳಿಂದ ಆಗಿರುವ ಗಾಯಗಳಿಗೆ ಕವಿ ನೀಡುವ ಕಾವ್ಯದ ಮುಲಾಮೇ ಅಂತಿಮ ಔಷಧ. ಕವಿತೆಯಿಂದ ಈ ಜಗತ್ತನ್ನು ಗೆಲ್ಲಲು ಸಾಧ್ಯ. ಕೋವಿ ಮತ್ತು ಕತ್ತಿಗಳಿಗೆ ನಮ್ಮ ನಮ್ಮ ಕಾವ್ಯದಿಂದ ತುಕ್ಕು ಹಿಡಿಸಲು ಪ್ರಯತ್ನಿಸೋಣ ಎಂದು ಪತ್ರಕರ್ತ, ಸಾಹಿತಿ
ಶಿ.ಜು.ಪಾಶ ಹೇಳಿದರು.

ಶಿವಮೊಗ್ಗದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಸಿರಿಗನ್ನಡ ವೇದಿಕೆ, ಸಿರಿಗನ್ನಡ ಮಹಿಳಾ ವೇದಿಕೆ ಹಮ್ಮಿಕೊಂಡಿದ್ದ `ಮಥುರಾ ಪ್ಯಾರಡೈಸ್ ರಜತ ಮಹೋತ್ಸವ’ದ ಸವಿನೆನಪಿನ ಡಾ.ಜೆ.ವಿ.ನಾಗರತ್ನಮ್ಮರವರ ಸಾಹಿತ್ಯ ಸಂಗಮ ಕೃತಿ ಬಿಡುಗಡೆ ಹಾಗೂ ಕವಿಗೋಷ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಜಗತ್ತಿನಲ್ಲಿ ಎಲ್ಲದನ್ನೂ ದಕ್ಕಿಸಿಕೊಳ್ಳಬಹುದು. ಸಾಹಿತ್ಯವನ್ನು ದಕ್ಕಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಲೇಖಕ ತನ್ನೊಳಗೆ ಭಾವತಲ್ಲಣಗಳಿಗೆ ಒಳಗಾಗಿ ಕವಿತೆ, ಕಥೆ, ಕಾದಂಬರಿ ಬರೆದುಬಿಡಬಹುದು. ಅದು ಓದುವವರಿಗೂ ಹಾಗೂ ಬರೆದ ಲೇಖಕರಿಗೂ ಸಂಪೂರ್ಣವಾಗಿ ದಕ್ಕುವುದಿಲ್ಲ ಎಂಬುದೇ ಅಂತಿಮ ಸತ್ಯ. ಹಾಗಾಗಿ, ಓದುವವರು ಓದುತ್ತಲೇ ಇರುತ್ತಾರೆ. ಬರೆಯುವವರು ಮತ್ತೆ ಮತ್ತೆ ಬರೆಯುತ್ತಲೇ ಇರುತ್ತಾರೆ. ಸಾಹಿತ್ಯವನ್ನು ದಕ್ಕಿಸಿಕೊಳ್ಳುವ ನಿರಂತರ ಪ್ರಯತ್ನ ನಡೆಯುತ್ತಲೇ ಇರುತ್ತದೆ ಎಂದರು. ಈ ಕಠೋರ ಜಗತ್ತಲ್ಲಿ `ಕವಿ ಹೃದಯಿ’ ಎನಿಸಿಕೊಳ್ಳುವುದು ಸುಲಭ ಸಾಧ್ಯವಲ್ಲ. ಎಲ್ಲರಿಗೂ ಈ ವಿಶೇಷವಾದ ಕವಿಹೃದಯ ಇರಲು ಸಾದ್ಯವಿಲ್ಲ. ಈ ಜಗತ್ತಿನ ತುಂಬಾ ಇಂಥ ಹೃದಯಗಳೇ ಇದ್ದುಬಿಟ್ಟಿದ್ದರೆ ಎಲ್ಲೂ ಯುದ್ಧಗಳಾಗುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Mathura Paradise ಅಧ್ಯಕ್ಷತೆಯನ್ನು ಸಹ್ಯಾದ್ರಿ ಕಾಲೇಜಿನ ಅಧ್ಯಾಪಕರಾದ ಡಾ.ಲವ ಜಿ.ಆರ್. ವಹಿಸಿದ್ದರು. ವೇದಿಕೆಯಲ್ಲಿ ಫ್ರೊ.ಸತ್ಯನಾರಾಯಣ್, ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷರಾದ ಎ.ಹೆಚ್.ನಿರಂಜನ್ ಕುಮಾರ್, ಸಿರಿಗನ್ನಡ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ಶ್ರೀಮತಿ ನಂದಾ ಪ್ರೇಮಕುಮಾರ್ ಇದ್ದರು.

ಟಿಎಂಎಇಎಸ್ ಮಹಾವಿದ್ಯಾಲಯದ ಆಯುರ್ವೇದ ವೈದ್ಯರಾದ ಡಾ.ಮೈಥಿಲಿ ಪೂರ್ಣಾನಂದ್ ಆಯುರ್ವೇದ ಮತ್ತು ಆರೋಗ್ಯದ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಡಾ.ಜೆ.ವಿನಾಗರತ್ನಮ್ಮರವರ ಸಾಹಿತ್ಯ ಸಂಗಮ ಕೃತಿಯನ್ನು ಬಿಡುಗಡೆ ಮಾಡಲಾಯಿತು. ೨೫ಕ್ಕೂ ಹೆಚ್ಚಿನ ಕವಿಗಳು ತಮ್ಮ ಕವಿತೆಗಳನ್ನು ವಾಚಿಸಿದರು.
ನಿತೀಶ್ ಕಾಂತೇಶ್ ಪ್ರಾರ್ಥಿಸಿ, ಶ್ರೀಮತಿ ಹಾ.ಮ.ಸುಲೋಚನಾ ಸ್ವಾಗತಿಸಿದರು. ಕವಿಗೋಷ್ಟಿಯ ನಿರೂಪಣೆಯನ್ನು ಶ್ರೀಮತಿ ಸರಳಾ ಕಿರಣ್ ಕುಮಾರ್ ಮಾಡಿದರು. ನಳಿನ ಬಾಲಸುಬ್ರಹ್ಮಣ್ಯ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mallikarjun Kharge ಸಂವಿಧಾನ & ಪ್ರಜಾಪ್ರಭುತ್ವ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Mallikarjun Kharge ಬೆಳಗಾವಿ, ಜ.21 ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ...

MESCOM ಜನವರಿ 24. ಶಿವಮೊಗ್ಗ ನಗರ ಉಪವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ – 3 ಕಛೇರಿಯಲ್ಲಿ ಜ....