Rabindra Kalakshetra ರಾಜ್ಯಾದ್ಯಂತ ಹಾಸ್ಯ ಕಾರ್ಯಕ್ರಮಗಳ ಮೂಲಕ ಮೌಲ್ಯಗಳ ಅರಿವು ಮೂಡಿಸುವ ಜತೆಯಲ್ಲಿ ವಿಶೇಷ ಸಾಧನೆ ಮಾಡಿರುವ ಜಿಲ್ಲೆಯ ಹಾಸ್ಯ ಕಲಾವಿದೆ ಕವಿತಾ ಸುಧೀಂದ್ರ ಅವರಿಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಸುರ್ವೆ ಕಲ್ಚರಲ್ ಅಕಾಡೆಮಿಯಿಂದ ಆಯೋಜಿಸಿದ್ದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದ 11ನೇ ಆವೃತ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ಪ್ರದಾನ ಮಾಡಯಿತು.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಸಮಾರಂಭ ನಡೆಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿರುವ ಕವಿತಾ ಅವರು ಇನ್ನಷ್ಟು ಹೆಚ್ಚು ಕಾರ್ಯಕ್ರಮ ನಡೆಸಿಕೊಡುವ ಮೂಲಕ ಯಶಸ್ಸು ಕಾಣಲಿ ಎಂದು ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ ವೆಂಕಟೇಶ್, ಕಾರ್ಯದರ್ಶಿ ಖಜಾಂಚಿ, ಪದಾಧಿಕಾರಿಗಳು ಅಭಿನಂದನೆ ತಿಳಿಸಿದ್ದಾರೆ.
Rabindra Kalakshetra ಶಿವಮೊಗ್ಗದ ಕವಿತಾ ಸುಧೀಂದ್ರ ಅವರು ಮಹಿಳಾ ಹಾಸ್ಯ ಕಲಾವಿದರಾಗಿದ್ದು, ವಿವಿಧ ಚಾನಲ್‌ಗಳಲ್ಲಿ ಹಾಗೂ ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಜೀವನ ಕೌಶಲ್ಯ ಹಾಗೂ ಮೌಲ್ಯ ಕುರಿತು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ತೀರ್ಥಹಳ್ಳಿ ಬಿ.ಇ.ಒ .ಕಚೇರಿಯಲ್ಲಿ ವಿಶೇಷ ಮಕ್ಕಳಿಗೆ ಸಮನ್ವಯ ಸಂಪನ್ಮೂಲ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಎನ್‌ಎಸ್‌ಎಸ್ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಭರತನಾಟ್ಯ ಕಲಾವಿದೆ, ಹಾಡುಗಾರ್ತಿ, ಬರಹಗಾರ್ತಿಯಾಗಿದ್ದಾರೆ.