Khel Ratna Award ಪ್ರತಿ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಧ್ಯಾನ್ ಚಂದ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಈ ಪಟ್ಟಿಯಲ್ಲಿ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಪದಕ ಬಾಚಿಕೊಂಡ ಸಾಧಕರಿದ್ದಾರೆ. ಮನು ಭಾಕರ್ , ಹರ್ಮನ್ ಪ್ರೀತ್ ಸಿಂಗ್ , ಡಿ.ಗುಕೇಶ್, ಪ್ರವೀಣ್ ಕುಮಾರ್ ಅವರಿಗೆ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಪ್ಯಾರೀಸ್‌ನಲ್ಲಿ ಭಾರತದ ಕ್ರೀಡಾಭಿಮಾನಿಗಳಿಗೆ ಡಬಲ್ ಖುಷಿ ನೀಡಿದ ಮನು ಕೊರಳಿಗೆ ಖೇಲ್ ರತ್ನ ಗೌರವ ಸಂದಿದೆ. ಇವರು ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಹಾಗೂ ಮಿಶ್ರ ತಂಡ ವಿಭಾಗದಲ್ಲೂ ಕಂಚಿನ ಸಾಧನೆ ಮಾಡಿದ್ದರು.
ಪ್ಯಾರಿಸ್‌ನಲ್ಲಿ ನಡೆದಿದ್ದ ಪ್ಯಾರಾಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಸ್ಥಿರ ಪ್ರದರ್ಶ ನೀಡಿ ದೇಶಕ್ಕಿ ಕೀರ್ತಿ ತಂದ ಅಥ್ಲಿಟ್‌ಹಳ ಸಾಲಿನ ಕಾಣಿಸಕೊಳ್ಳುವ ಇನ್ನೊಂದು ಹೆಸರು ಪ್ರವೋಣ್ ಕುಮಾರ್. ಇವರು ಹೈಜಂಪ್‌ನ ಟಿ64 ನಲ್ಲಿ ಬಂಗಾರ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರಿಗೂ ಖೇಲ್ ರತ್ನ ಪ್ರಶಸ್ತಿ ಸಂದಿದೆ.
Khel Ratna Award ಇತ್ತೀಚಿಗೆ ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಡಿ ಗುಕೇಶ್ ಅವರ ಮುಡಿಗೂ, ಖೇಲ್ ರತ್ನ ಪ್ರಶಸ್ತಿ ಸಂದಿದೆ. ಇವರು ಚೆಸ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಭಾರತದ ಎರಡನೇ ಚೆಸ್ ಆಟಗಾರ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇವರಿಗೂ ಮೊದಲು ವಿಶ್ವನಾಥನ್ ಆನಂದ್ ಈ ಸಾಧನೆ ಮಾಡಿದ್ದರು.
ಟೀಮ್ ಇಂಡಿಯಾ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರ ಅಮೋಘ ಕ್ರೀಡಾ ಜೀವನಕ್ಕಾಗಿ ಇವರಿಗೆ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಸಂದಿದೆ. ಇವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಅಲ್ಲದೆ ಸತತ ಎರಡನೇ ಬಾರಿಗೆ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿತ್ತು. ಇವರ ಈ ಸಾಧನೆಗೆ ಕೇಂದ್ರ ಸರ್ಕಾರ ಗೌರವ ನೀಡಿದೆ.