Thursday, January 23, 2025
Thursday, January 23, 2025

Yashasvini Yojana ಯಶಸ್ವಿನಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭ

Date:

Yashasvini Yojana ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು.

ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.

ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

Yashasvini Yojana ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹರೀಶ್, ಯಶಸ್ವಿನಿ ಯೋಜನೆಯ ಕೋ-ಆರ್ಡಿನೇಟರ್ ಮೊ;9739588777 ಗೆ ಸಂಪರ್ಕಿಸಬಹುದಾಗಿದ್ದು, ಫಲಾನುಭವಿಗಳು ಈ ಯೋಜನೆ ಸದುಪಯೋಗ ಪಡಿಸಿಕೊಳ್ಳುಬೇಕೆಂದು ಸಹಕಾರ ಸಂಘಟಗಳ ಉಪನಿಬಂಧಕರಾದ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Siddaramaiah ನೇತಾಜಿ ಪ್ರತಿಮೆಗೆ ಸಿದ್ಧರಾಮಯ್ಯ ಅವರಿಂದ ಪುಷ್ಪ ಮಾಲಾರ್ಪಣೆ

Siddaramaiah ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ...

B.Y Vijayendra ಸ್ವಾಮಿ ವಿವೇಕಾನಂದರಂತಹ ಸಂತರು ನಮ್ಮ ದೇಶದ ಹಿರಿಮೆ ಸಾರಿದ್ದಾರೆ- ಬಿ.ವೈ.ವಿಜಯೇಂದ್ರ

B.Y Vijayendra ಸಂತರು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಸಮಾಜಕ್ಕೆ ನೀಡುತ್ತ ಬರುತ್ತಿರುವುದರಿಂದ ಇತರೆ...

M. B. Patil ಉದ್ಯಮ ದಿಗ್ಗಜರ ಸಂಗಡ ಸಚಿವ ಎಂ.ಬಿ.ಪಾಟೀಲ್ ಸಮಾಲೋಚನೆ

• ರಾಜ್ಯದಲ್ಲಿ ಹೂಡಿಕೆ ಹೆಚ್ಚಳ, ವಹಿವಾಟು ವಿಸ್ತರಣೆಗೆ ಐಟಿಸಿ, ರಿನ್ಯೂ ಪವರ್‌,...