Karnataka Urban Water Supply and Drainage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.
Karnataka Urban Water Supply and Drainage Board ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.