BJP Shivamogga ರಾಜ್ಯದಲ್ಲಿ ಬಾಣಂತಿಯರು ಮತ್ತು ಹಸುಗೂಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಅವರು ಭಾಗವಹಿಸಿದ್ದರು.
BJP Shivamogga ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಿಕಾರಿಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಮತ್ತು ಭಾರತಿ ಶೆಟ್ಟಿ, ಮಹಿಳಾ ಮೋರ್ಚಾದ ಜಿಲ್ಲಾ ಹಾಗೂ ನಗರದ ಪದಾಧಿಕಾರಿಗಳು, ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.