ಶಿವಮೊಗ್ಗ ಜಿಲ್ಲೆಯ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರರಾದ ಶಶಿಧರ್ ಅನಾರೋಗ್ಯದಿಂದ (39) ಜನವರಿ 11ರಂದು ನಿಧನರಾಗಿದ್ದಾರೆ.
ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಸುಮಾರು 6 ವರ್ಷದಿಂದ ಕೆಲಸ ಮಾಡುತ್ತಿದ್ದ ಶಶಿಧರ್ ಈ ಹಿಂದೆ 8 ವರ್ಷಗಳ ಕಾಲ ಚಾಮರಾಜ ನಗರ ಜಿಲ್ಲೆಯಲ್ಲಿ ಪಬ್ಲಿಕ್ ಟಿ.ವಿ. ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಬಿಜಾಪುರ ಜಿಲ್ಲೆಯಲ್ಲಿ ಈ ಟಿವಿ ವರದಿಗಾರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು.
Public TV ಮಿತ ಭಾಷಿಯಾಗಿದ್ದ ಶಶಿಧರ್ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ವ್ಯಕ್ತಿತ್ವದವರಾಗಿದ್ದರು. ಕಡೂರು ಬಳಿಯ ಎಸ್. ಕಲ್ಲಳ್ಳಿ ಗ್ರಾಮದವರು.
ಇವರ ನಿಧನದಿಂದಾಗಿ ರಾಜ್ಯದ ಪತ್ರಿಕೋದ್ಯಮಕ್ಕೆ ದೊಡ್ಡ ನಷ್ಟವಾಗಿದೆ.
ಶಶಿಧರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.