Saturday, December 6, 2025
Saturday, December 6, 2025

Government First Class College ಶಿಕಾರಿಪುರ ಸರ್ಕಾರಿ ಕಾಲೇಜಿನಲ್ಲಿ ಯುವನಿಧಿ ನೋಂದಣಿ ಅಭಿಯಾನ

Date:

Government First Class College ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24 ಹಾಗೂ 2024 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗಾಗಿ ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜ.6 ರಿಂದ ಜ.20 ವರೆಗೆ ಕಾಲೇಜಿನಲ್ಲಿ ಸಹಾಯಕೇಂದ್ರ ಸ್ಥಾಪಿಸಲಾಗಿದೆ.

ಯುವನಿಧಿ ಅರ್ಜಿ ಸಲ್ಲಿಸುವ ಯುವಕ/ ಯುವತಿಯರು 2022, 2023 ಹಾಗೂ 2024 ರಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು, ಕರ್ನಾಟಕದಲ್ಲಿ ವಾಸವಿರಬೇಕು ಮತ್ತು ಕನಿಷ್ಟ 6 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿರಬೇಕು ಎಂಬ ಅರ್ಹತೆಗಳು ಒಳಗೊಂಡಿದೆ.

Government First Class College ಇವೆಲ್ಲಾ ಅರ್ಹತೆ ಹೊಂದಿರುವ ಯುವಕ/ಯುವತಿಯರು ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ, ಎಲ್ಲಾ ವಿಭಾಗದ ಮುಖ್ಯಸ್ಥರು, ಸ್ಥಳೀಯ ಸೈಬರ್ ಕೇಂದ್ರಗಳು, ಸೇವಾಸಿಂಧು ಪೋರ್ಟಲ್ ಹಾಗೂ ತಮ್ಮ ಮೊಬೈಲ್ ನಲ್ಲಿ ನೊಂದಣಿ ಮಾಡಿಕೊಳ್ಳಬಹುದು.
ನೊಂದಾಣಿ ಎಸ್‌ಎಸ್‌ಎಲ್‌ಸಿ/ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮ ಪ್ರಮಾಣ ಪತ್ರ ಹಾಗೂ ಪ್ರತಿ ಮಾಹಿಗೆ ದಿ.1 ರಿಂದ 25 ರೊಳಗೆ ಮಾಸಿಕ ಸ್ವಯಂ ಫೋಷಣೆ ನೀಡುವುದು ಕಡ್ಡಾಯವಾಗಿದೆ ಎಂದು ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...