Ambigara Chowdaiya ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಜ.21 ರ ಬೆಳಿಗ್ಗ 11 ಗಂಟೆಗೆ ನಗರದ ಕುವೆಂಪು ರಂಗಮಂದಿರಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ವಿಶೇಷ ಅಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ತಂಗಡಗಿ ಶಿವರಾಜ್ ಸಂಗಪ್ಪ ಪಾಲ್ಗೊಳ್ಳುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಗಂಗಾ ಮತಸ್ಥರ ಸಮಾಜ ಅಧ್ಯಕ್ಷರು, ತಾಲ್ಲೂಕು ಗಂಗಾ ಮತಸ್ಥರ ಸಮಾಜ ಅಧ್ಯಕ್ಷರು, ಜಿಲ್ಲಾ ಮೊಗವೀರರ ಸಂಘ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಉಪನ್ಯಾಸ ನೀಡುವರು.
Ambigara Chowdaiya ಜನವರಿ 21. ಅಂಬಿಗರ ಚೌಡಯ್ಯ ಜಯಂತಿ
Date: