Monday, May 4, 2026
Monday, May 4, 2026

Urban Development Authority ಸೈಟು ನೀಡುವ ಸುಳ್ಳು ಹೇಳಿಕೆಗೆ ಮರುಳಾಗಬೇಡಿ ಸೂಡಾ ಎಚ್ಚರಿಕೆ

Date:

Urban Development Authority ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ.

ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
Urban Development Authority ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ. ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...