Republic Day ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಸ್ಥಾನ ಗಳಿಸಿದ ಕ್ರೀಡಾಪಟುಗಳನ್ನು ಸನ್ಮಾನಿಸಲು ಜ.10 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
Republic Day 2024 ರ ಜನವರಿ ಯಿಂದ 2025 ರ ಜನವರಿವರೆಗೆ ಒಂದು ವರ್ಷದ ಅವಧಿಯಲ್ಲಿ ಅಂತರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಜಿಲ್ಲೆಯಿಂದ ಭಾಗವಹಿಸಿ ಸ್ಥಾನ ಗಳಿಸಿರುವ ಪ್ರತಿಭಾನ್ವಿತ ಕ್ರೀಡಾಪಟುಗಳು ತಮ್ಮ ಸ್ವ ವಿವರವುಳ್ಳ ಅರ್ಜಿಯೊಂದಿಗೆ ಭಾಗವಹಿಸಿದ ಪ್ರಶಸ್ತಿ ಪತ್ರಗಳ ನಕಲುಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಯವ ಸಬಲೀಕರಣ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಈ ಕಚೇರಿಗೆ ಜ.20 ರೊಳಗಾಗಿ ಸಲ್ಲಿಸಬೇಕು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.