Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ರೆಡ್ಡಿ ಸಂಘ ಇವರ ಸಹಯೋಗದೊಂದಿಗೆ ಜ.19 ರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ವಿಶೇಷ ಅಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಪಾಲ್ಗೊಳ್ಳಲಿದ್ದಾರೆ.
Department of Kannada and Culture ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ರೆಡ್ಡಿ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಆರ್.ರತ್ನಯ್ಯ ಉಪನ್ಯಾಸ ನೀಡುವರು.
