CM Siddaramaiah ʼಮನೆಗೊಂದು ಗ್ರಂಥಾಲಯʼ ಯೋಜನೆಯಡಿ ಕುಮಾರವ್ಯಾಸ ಭಾರತ ಕೃತಿಯ ಸಂಪುಟಗಳನ್ನು
ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಿದರು.
ಆಡು ಭಾಷೆಯಲ್ಲಿ ಮಹಾಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ʼಕರ್ಣಾಟ ಭಾರತ ಕಥಾಮಂಜರಿ’ ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತವಾಗಿದೆ.
ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸ ಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು.
CM Siddaramaiah ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸ ಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸ ಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳಿಗೆ ಒಟ್ಟು ರೂ.500 ಬೆಲೆ ನಿಗದಿಪಡಿಸಲಾಗಿದೆ
ಎಂದು ಮುಖ್ಯಮಂತ್ರಿ ತಿಳಿಸಿದರು.