Thursday, January 23, 2025
Thursday, January 23, 2025

Karnataka Public Service Commission ಗ್ರೂಪ್ ‘ಬಿ’ ವೃಂದದ ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆಗೆ ಸೂಚನೆ

Date:

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬAಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Karnataka Public Service Commission ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ನಗರದಲ್ಲಿ ಒಟ್ಟು 7182 ಅಭ್ಯರ್ಥಿಗಳು ಹಾಗೂ ಜ.25 ರಂದು ನಡೆಯುವ ನಿರ್ದಿಷ್ಟ ಪತ್ರಿಕೆಗೆ 6414 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.
ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್‌ಚೇರ್ ಒದಗಿಸಲಾಗುವುದು ಎಂದರು.
ಪರೀಕ್ಷಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mallikarjun Kharge ಸಂವಿಧಾನ & ಪ್ರಜಾಪ್ರಭುತ್ವ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Mallikarjun Kharge ಬೆಳಗಾವಿ, ಜ.21 ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ...

MESCOM ಜನವರಿ 24. ಶಿವಮೊಗ್ಗ ನಗರ ಉಪವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ – 3 ಕಛೇರಿಯಲ್ಲಿ ಜ....