Bharat Scouts and Guides ಶಿವಮೊಗ್ಗ ನಗರದಲ್ಲಿ ನಾಗರೀಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಜ.18 ರಂದು ರಸ್ತೆ ಸುರಕ್ಷತಾ ರ‍್ಯಾಲಿ ಹಾಗೂ ಶಿವಮೊಗ್ಗ ತಾಲ್ಲೂಕು ಮಟ್ಟದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ, ಘೋಷ ವಾಕ್ಯ ಸ್ಪರ್ಧೆಯನ್ನು ಏರ್ಪಡಿಸಿದೆ.
ದಿನಾಂಕ: 18.01.2025 ರ ಶನಿವಾರ ಮಧ್ಯಾಹ್ನ 2.00 ಗಂಟೆಗೆ ಜಿಲ್ಲಾ ಸ್ಕೌಟ್ ಭವನ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.
Bharat Scouts and Guides ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಕ್ತರು (ರೋವರ್) ಕೆ. ರವಿ ಮೊ.ಸಂ : 9663883213 ಮತ್ತು ಜಿಲ್ಲಾ ಕಾರ್ಯದರ್ಶಿ, ಚಂದ್ರಶೇಖರಯ್ಯ ಕೆ.ವಿ ಮೊ.ಸಂ: 9481066064 ಇವರನ್ನು ಸಂಪರ್ಕಿಸಬಹುದೆಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ತಿಳಿಸಿದ್ದಾರೆ.