CM Siddharamaiah ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಹೋರಾಟಗಾರರಿಗೆ ಮಾಡಿದ ಅವಮಾನ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು.
CM Siddharamaiah ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.