Karnataka Olympics ಕರ್ನಾಟಕ ಸರ್ಕಾರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಹಾಗೂ ಕರ್ನಾಟಕ ಒಲಂಪಿಕ್ಸ್ ಸಹಯೋಗದಲ್ಲಿ ಜನವರಿ 18ರಿಂದ 20 ವರೆಗೆ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆದ
ಕರ್ನಾಟಕ ರಾಜ್ಯ ಸ್ಟೇಟ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರತಿನಿಧಿಸಿದ್ದ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ನ ಕ್ರೀಡಾಪಟುಗಳಾದ ಮೀನಾಕ್ಷಿ ಭವನದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿವೇದಿತಾ ಆರ್ 65-70 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದು, ಕರ್ನಾಟಕ ಒಲಂಪಿಕ್ಸ್ ನಲ್ಲಿ ಇದು ಶಿವಮೊಗ್ಗ Karnataka Olympics ಜಿಲ್ಲೆಗೆ ಮೊದಲ ಚಿನ್ನದ ಪದಕವಾಗಿದೆ ಮತ್ತು ಶಿವಮೊಗ್ಗದ ವಿದ್ಯಾಭಾರತಿ ಕಾಲೇಜಿನ ವಿದ್ಯಾರ್ಥಿ ಸಮೃದ್ಧ 60-65 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದು ಈ ಇಬ್ಬರು ಕ್ರೀಡಾಪಟುಗಳು ಶಿವಮೊಗ್ಗದ ಬಾಕ್ಸಿಂಗ್ ಕೋಚ್ ಮೀನಾಕ್ಷಿ ರವರ ಬಳಿ ತರಬೇತಿ ಪಡೆಯುತ್ತಿದ್ದು, ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಸೇರಿದಂತೆ ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿ ಅಭಿನಂದನೆ ತಿಳಿಸಿದ್ದಾರೆ
Karnataka Olympics ಕರ್ನಾಟಕ ಒಲಿಂಪಿಕ್ಸ್: ಶಿವಮೊಗ್ಗ ಜಿಲ್ಲೆಗೆ ಚಿನ್ನ ಮತ್ತು ಕಂಚಿನ ಪದಕ
Date: