Akashavani Bhadravati ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್.ಮುರುಗನ್ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಪದಾಧಿಕಾರಿಗಳು ಸನ್ಮಾನಿಸಿದರು.
ಕೆನಡಾದಿಂದ ತರಲಾಗಿರುವ 10 ಕಿಲೋವ್ಯಾಟ್ ಸಾಮರ್ಥ್ಯದ ಟ್ರಾನ್ಸ್ ಮೀಟರ್ ಅಳವಡಿಕೆ ಕಾರ್ಯಕ್ರಮದ ಚಾಲನೆ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜನಪ್ರತಿನಿಧಿಗಳನ್ನು ಅಭಿನಂದಿಸಿದರು. ಟ್ರಾನ್ಸ್ ಮೀಟರ್ ಅಳವಡಿಕೆಯಿಂದ ಪ್ರಸಾರ ಸಾಮರ್ಥ್ಯ ಹತ್ತುಪಟ್ಟು ಹೆಚ್ಚಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಲ್ಲೂ ಆಕಾಶವಾಣಿ ಕಾರ್ಯಕ್ರಮ ಕೇಳಬಹುದಾಗಿದೆ.
Akashavani Bhadravati ಶಾಸಕ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಕಿರಣ್‌ಕುಮಾರ್, ಶಿವಕುಮಾರ್, ರವಿಪ್ರಕಾಶ್, ಜನ್ನಿ, ರಾಜಶೇಖರ್, ಆಕಾಶವಾಣಿಯ ಎಸ್.ಆರ್.ಭಟ್, ಡಾ. ರಘು, ಆಕಾಶವಾಣಿ ನಿರ್ದೇಶಕರು ಸಿಬ್ಬಂದಿ ವರ್ಗ ಇದ್ದರು.