Shivamogga City Corporation 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.26ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.
Shivamogga City Corporation ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗಾಂಧೀ ಬಜಾರ್ ಬಸವೇಶ್ವರ ದೇವಸ್ಥಾನದ ಹತ್ತಿರ, ಅರ್.ಎಂ.ಎಲ್.ನಗರ ಕಿದ್ವಾಯಿ ಶಾಲೆ ಎದುರು, ಪೊಲೀಸ್ ಚೌಕಿ ವಿನೋಬನಗರ ಪೊಲೀಸ್ ಠಾಣೆ ಎದುರು, ರವೀಂದ್ರನಗರ ಪಾರ್ಕ್ ಹತ್ತಿರ ಹಾಗೂ ಗುಡ್‌ಲಕ್ ಸರ್ಕಲ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
Shivamogga City Corporation ನೀರಿನ ಕಂದಾಯ ಸ್ವೀಕೃತಿಗೆ ಮಹಾನಗರ ಪಾಲಿಕೆಯಿಂದ ಭಾನುವಾರ ವಿಶೇಷ ಕೌಂಟರ್
Date: