Thursday, March 19, 2026
Thursday, March 19, 2026

National Voter’s Day ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ನಾವೆಲ್ಲಾ ಪ್ರಯತ್ನಿಸಬೇಕು- ನ್ಯಾ.ಮಂಜುನಾಥ ನಾಯಕ್

Date:

National Voter’s Day ಮತದಾನ ಕೇವಲ ಹಕ್ಕಲ್ಲ. ಅದು ನಮ್ಮ ಕರ್ತವ್ಯ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.25 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಯುವಕರು ಮತದಾನ ಮಾಡುವಲ್ಲಿ ಹಿಂದೆ ಉಳಿದಿದ್ದಾರೆ. ಮತದಾನದ ಮಹತ್ವವನ್ನು ತಿಳಿಯದೆ ನಿರಾಸಕ್ತರಾಗಿದ್ದಾರೆ. ಆದ್ದರಿಂದ ಮತದಾನವೂ ಕೂಡ ಕುಂಠಿತವಾಗುತ್ತಿದೆ. ಮತದಾನದದ ಮಹತ್ವದ ಕುರಿತು ಅರಿವು ಮೂಡಿಸುವಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಎಂದರು.

ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಗಳ ತಂಡದ ಪರಿಶ್ರಮದಿಂದ ಮತದಾನದಲ್ಲಿ ಸುಧಾರಣೆಯಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಬೇಕಿದೆ. ಎಲ್ಲರೂ ಮತದಾನದಲ್ಲಿ ಭಾವಹಿಸಬೇಕೆಂಬ ನಿಟ್ಟಿನಲ್ಲಿ ಹೈಕೋರ್ಟ್‌ ನೋಟಾ ಎಂಬ ಹೊಸ ನಿಯಮ ಜಾರಿ ತಂದಿದೆ. ಆ ಮೂಲಕ ಮತದಾರರು ಮತದಾನದಲ್ಲಿ ಭಾಗವಹಿಸಿ ತಮ್ಮ ನಿಲುವನ್ನು ವ್ಯಕ್ತಪಡಿಸಲು ಅವಕಾಶ ನೀಡಿದೆ ಎಂದರು.

ಮೊದಲೆಲ್ಲಾ 20 ವರ್ಷ ತುಂಬಿದವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು. 1988 ರಲ್ಲಿ ಅದನ್ನು ತಿದ್ದುಪಡಿ ಮಾಡಿದ ನಂತರ 18 ವರ್ಷ ತುಂಬಿದವರಿಗೆ ಮತದಾನ ಮಾಡುವ ಅವಕಾಶ ದೊರಕಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಮ್ಮನ್ನು ಆಳುವವರು ಯಾರು ಎಂದು ತೀರ್ಮಾನ ಮಾಡಲು ಮತದಾನವನ್ನು ಮಾಡಬೇಕು. ಆ ಮೂಲಕ ಎಲ್ಲರೂ ಮತದಾನದಲ್ಲಿ ಭಾವಹಿಸಬೇಕು ಎಂದು ಕರೆ ನೀಡಿದರು.

National Voter’s Day ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ವಹಿಸಿದ್ದರು.
ಈ ವೇಳೆ ಉತ್ತಮ ಮತಗಟ್ಟೆ ಅಧಿಕಾರಿಗಳನ್ನು, ಕಂಪ್ಯೂಟರ್ ಆಪರೇಟರ್‌ಗಳನ್ನು ಹಾಗೂ ಸ್ವೀಪ್ ಸಮಿತಿ ಅಧಿಕಾರಿಯನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಸ್, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್‌ ವರಿಚ್ಟಾಧಿಕಸರಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ ಸಿಇಓ ಹೇಮಂತ್ ಎನ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್‌, ಎಸಿ ಸತ್ಯನಾರಾಯಣ, ತಹಶೀಲ್ದಾರ್ ವಿ.ಎಸ್ ರಾಜೀವ್, ಚುನಾವಣಾ ತಹಶೀಲ್ದಾರ್ ಪ್ರದೀಪ್ ಆರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಿಯಾ ಹಾಗೂ ಮಹಾನಗರಪಾಲಿಕೆ ಆಡಳಿತಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...