Monday, January 27, 2025
Monday, January 27, 2025

Republic Day ಸಂವಿಧಾನ ಪೀಠಿಕೆ‌ ವಾಚಿಸಿ ಉದ್ಘಾಟಿಸಿದ‌ ಸಚಿವ‌ ಮಧು‌ ಬಂಗಾರಪ್ಪ

Date:

Republic Day ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ ಸಮಾನತೆ ಮತ್ತು ಸೌಹಾರ್ಧತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ ಪೀಠಿಕೆಯನ್ನು ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಗಣರಾಜ್ಯ ದಿನವಾದ ಇಂದು ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಭಾರತದಂತಹ ಬೃಹತ್ ರಾಷ್ಟçದ ಎಲ್ಲರೂ ಒಪ್ಪಿತ ಏಕೈಕ ಸಂವಿಧಾನ ನಮ್ಮದಾಗಿದೆ. ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮದಾಗಿದೆ. ಹಲವು ರಾಜ್ಯಗಳಾಗಿ ವಿಂಗಡಣೆಯಾಗಿದ್ದರೂ, ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಟ ರಾಷ್ಟ್ರವಾಗಿ ದೇಶ ಬೆಳೆದು ನಿಂತಿದೆ ಎಂದರು.
Republic Day ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಭೇಟಿ ನೀಡಿದ ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಭಾಗವಾಗಿ ೨೦೨೫ರ ಅಕ್ಟೋಬರ್ ೦೨ರಿಂದ ೨೦೨೬ರ ಅಕ್ಟೋಬರ್ ಮಾಹೆಯವರೆಗೆ ಗಾಂಧೀ ಭಾರತ ಹೆಸರಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದರು.
೨೦೨೩ರ ಸೆಪ್ಟಂಬರ್ 05 ರಿಂದ ಇಂದಿನವರೆಗೆ ರಾಜ್ಯದ ಎಲ್ಲಾ ಶಾಲೆಗಳ ಸುಮಾರು ೧.೦೮ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಪರಿಪಾಠ ಆರಂಭಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲಾಗುತ್ತಿದೆ ಎಂದ ಅವರು, ಪೀಠಿಕೆಯನ್ನು ಅರ್ಥೈಸಿಕೊಂಡು ಅನುಸರಿಸುವ ಅಗತ್ಯವಿದೆ ಎಂದವರು ನುಡಿದರು.
ಗ್ಯಾರೆಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಸಾಮಾಜಿಕ ಆರ್ಥಿಕ ಸಮಾನತೆಗೆ ಸಹಕಾರಿಯಾಗಿದೆ ಎಂದ ಅವರು, ಸರ್ಕಾರದ ವತಿಯಿಂದ ಇನ್ನಷ್ಟು ರಚನಾತ್ಮಕ ಕಾರ್ಯಗಳನ್ನು ರೂಪಿಸಿ ಅನುಷ್ಟಾನಕ್ಕೆ ತರುವ ಉದ್ದೇಶ ಹೊಂದಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿದಂಧೆಗೆ ನಿಯಂತ್ರಣಕ್ಕೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದ್ದು, ಈ ಪಿಡುಗಿನ ಸಮಗ್ರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕುಪ್ಪಳಿಯಲ್ಲಿ ರಾಷ್ಟçಕವಿ ಕುವೆಂಪು ಅವರ ಆಶಯಕ್ಕೆ ವಿರುದ್ಧವಾಗಿ ನಡೆದ ಕಾರ್ಯಕ್ರಮದ ಕುರಿತು ವಿಷಾಧ ವ್ಯಕ್ತಪಡಿಸಿದ ಅವರು, ಸಮಗ್ರ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದಲ್ಲಿ ಈ ಹಿಂದೆ ಕೈಗೊಳ್ಳಲಾದ ಸ್ಮಾರ್ಟ್ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಆಗಿರಬಹುದಾದ ಲೋಪಗಳ ತನಿಖೆ ಹಾಗೂ ಪರಿಸರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಷಾಹಿ ಎಕ್ಸ್ಪೋರ್ಟ್ ಕಂಪನಿಯ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಸೊರಬ ತಾಲೂಕಿನ ಇತಿಹಾಸ ಪ್ರಸಿದ್ದ ಚಂದ್ರಗುತ್ತಿಯನ್ನು ಹಾಗೂ ಶ್ರೀ ರೇಣುಕಾಂಬ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ವಿಸ್ತೃತ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಗೆ ಅನುಮೋದನೆಗಾಗಿ ರವಾನಿಸಲಾಗಿದೆ. ಶೀಘ್ರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬAದಿಸಿದAತೆ ಈಗಾಗಲೇ ಸಚಿವ ಹೆಚ್.ಕೆ.ಪಾಟೀಲ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದವರು ನುಡಿದರು.
ನಗರದ ಹೃದಯಭಾಗದಲ್ಲಿರುವ ಅಲ್ಲಮಪ್ರಭು ಉದ್ಯಾನವನ, ಅಲ್ಲಮಪ್ರಭುಗಳ ಜನ್ಮಸ್ಥಳ ಅನಿಮಿಷಾರಣ್ಯ ಹಾಗೂ ಗುಡವಿ ಪಕ್ಷಿಧಾಮ ಪ್ರದೇಶದ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಣಕಾಸು ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಆನೆಗಳ ಹತೋಟಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.
ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಈಗಾಗಲೇ ಮಧ್ಯಂತರ ವರದಿಯನ್ನು ನೀಡಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ತಜ್ಞರ ಸಭೆಯ ತೀರ್ಮಾನದಂತೆ ರಾಜ್ಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದವರು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ರವಿಕುಮಾರ್, ಚಂದ್ರಭೂಪಾಲ, ಸುಂದರೇಶ್, ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

RM Manjunatha Gowda ಮಲೆನಾಡು ಅಭಿವೃದ್ಧಿ ಮಂಡಳಿಯ ಬಾಕಿ ಕಾಮಗಾರಿಗಳು‌ ಮಾರ್ಚ್ ಒಳಗೆ ಶೀಘ್ರ ಪೂರ್ಣಗೊಳ್ಳಬೇಕಿದೆ- ಆರ್.ಎಂ.ಮಂಜುನಾಥ ಗೌಡ

RM Manjunatha ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್...

Shimoga Yakshagana ಫೆಬ್ರವರಿ 22 ರಿಂದ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ – ಶಿವಾನಂದ‌‌ ಹೆಗಡೆ

Shimoga Yakshagana "ಕೋವಿಡ್ ನಂತರದ ಕಾಲಾವಧಿಯಲ್ಲಿ‌ ಯಕ್ಷಗಾನ ಕಲಾಕೇಂದ್ರ ಆರ್ಥಿಕ ಸಂಕಷ್ಟದಿಂದ...

Rotary Club Shimoga ಹೆತ್ತವರಿಗೆ ಗೌರವಾರ್ಥ ಸಿ, ನೈತಿಕ ಮೌಲ್ಯಗಳನ್ನ ಬೆಳೆಸಿಕೊಳ್ಳಿ- ಹೊಸತೋಟ ಸೂರ್ಯನಾರಾಯಣ್

Rotary Club Shimoga ಸಾಮಾಜಿಕ ಹಾಗೂ ಪ್ರಜಾಪುಭುತ್ವ ಮೌಲ್ಯಗಳ ಜೊತೆಗೆ ಮಾನವೀಯ, ನೈತಿಕ...