Wednesday, September 30, 2026
Wednesday, September 30, 2026

Red Cross Sanjeevini Blood Bank ರಕ್ತದಾನಕ್ಕಿಂತ ಮಿಗಿಲಾದ ದಾನವಿಲ್ಲ- ವಸಂತ ಹೋಬಳಿದಾರ್

Date:

Red Cross Sanjeevini Blood Bank ಜನ್ಮದಿನವನ್ನು ಸಮಾಜಮುಖಿಯಾಗಿ ಆಚರಿಸುವ ಮೂಲಕ ಅರ್ಥಪೂರ್ಣ ಸೇವಾ ಚಟುವಟಿಕೆಗಳನ್ನು ಮಾಡಬೇಕು ಎಂದು ರೋಟರಿ ಜಿಲ್ಲೆ ನಿಯೋಜಿತ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ಉಡುಪಿಯ ಶ್ರೀ ಕೃಷ್ಣ ಮಠದ ಆವರಣದ ಮಥುರಾ ಕಂಫರ್ಟ್ಸ್ನಲ್ಲಿ ರೋಟರಿ ಶಿವಮೊಗ್ಗ
ಮಿಡ್ ಟೌನ್ ಕೆ.ಕೃಷ್ಣಮೂರ್ತಿ ಅಭಿಮಾನಿ ಬಳಗ, ಯಶೋಧ ಆಟೋ ಯೂನಿಯನ್, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲದ ಸಂಯುಕ್ತ ಆಶ್ರಯದಲ್ಲಿ ದಾನಿ, ಸಮಾಜ ಸೇವಕ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ ಉಡುಪಿ ಸಹಕಾರದೊಂದಿಗೆ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಒಂದು ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ. ರಕ್ತದ ಸರಬರಾಜು ಇಲ್ಲದೆ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ರಕ್ತದ ಕೊರತೆ ನೀಗಿಸಲು ರಕ್ತದಾನ ಒಂದೇ ಮಾರ್ಗ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ನಾವು ಸದಾ ಲವಲವಿಕೆಯಿಂದ ಇರುವುದರ ಜತೆಗೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿ ಇರುತ್ತೇವೆ. ಹೃದಯಘಾತದ ಸಮಸ್ಯೆಯಿಂದ ದೂರ ಇರುತ್ತೇವೆ ಎಂದರು.
Red Cross Sanjeevini Blood Bank ಡಾ. ಗುಡದಪ್ಪ ಕಸಬಿ ಮಾತನಾಡಿ, ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು. ಈ ನಿಟ್ಟಿನಲ್ಲಿ ಶಿವಮೊಗ್ಗ ಹಾಗೂ ಉಡುಪಿಯ ಅನೇಕ ಸಂಘಟನೆಗಳೊಂದಿಗೆ ಸೇರಿಸಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷ ಸುರೇಶ್ ಮಾತನಾಡಿ, ಪ್ರತಿ ವರ್ಷ 300ಕ್ಕೂ ಹೆಚ್ಚು ಯೂನಿಟ್‌ಗಳ ಸಂಗ್ರಹಣೆ ಆಗುವುದರ ಜತೆಗೆ ಸಾಕಷ್ಟು ರಕ್ತದ ಕೊರತೆ ನೀಗಿಸುತ್ತಿರುವ ಇಂತಹ ಸಂಘಟನೆಗಳು ನಿಜಕ್ಕೂ ಅಭಿನಂದನಾರ್ಹ ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ 303 ಯೂನಿಟ್ ರಕ್ತ ಸಂಗ್ರಹವಾಯಿತು. ಕೆ.ಕೃಷ್ಣಮೂರ್ತಿ, ರಾಜೇಂದ್ರ ಪ್ರಸಾದ್, ರೋಟರಿ ನಿಯೋಜಿತ ಅಧ್ಯಕ್ಷ ಆನಂದ್, ದುರ್ಗಪ್ಪ, ಮಾಜಿ ಅಧ್ಯಕ್ಷೆ ವೀಣಾ ಸುರೇಶ್, ಡಾ. ಪ್ರಣೀತ್, ಡಾ. ತರುಣ್, ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...