MESCOM ಶಿವಮೊಗ್ಗ ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.30 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
MESCOM ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 30.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.