Monday, December 15, 2025
Monday, December 15, 2025

World Cancer Day ವೃತ್ತಿಯ ಜೊತೆಗೆ ಸಮಾಜ ಸೇವೆ ಅತಿಮುಖ್ಯ- ಬಿ.ಎ.ರಂಗನಾಥ್

Date:

World Cancer Day ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತಿ ಮುಖ್ಯ. ನಮ್ಮ ನಮ್ಮ ವೃತ್ತಿಯ ಜೊತೆಗೆ ಸಮಾಜಮುಖಿಯಾಗಿ ಅಗತ್ಯವಾದ ಸೇವೆಗಳನ್ನು ಸಲ್ಲಿಸುವುದರ ಮುಖಾಂತರ ಜನಮಾನಸವನ್ನು ತಲುಪೋಣ ಎಂದು ನೆಹರು ರಸ್ತೆ ವರ್ತಕರ ಸಂಘದ ಅಧ್ಯಕ್ಷರಾದ ಬಿ.ಎ.ರಂಗನಾಥ್ ಅವರು ಅಭಿಮತ ವ್ಯಕ್ತಪಡಿಸಿದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನೆಹರು ರಸ್ತೆಯ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ನೆಹರು ರಸ್ತೆ ವರ್ತಕರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶಿವಮೊಗ್ಗ, ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಮಟ್ಟ ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ಅರಿತುಕೊಳ್ಳುವುದರ ಜೊತೆಗೆ ನಾವು ಸದಾ ಉತ್ಸಾಹ ಭರಿತರಾಗಿ ಹಾಗೂ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ.

ರಕ್ತದಾನದಿಂದ ದೇಹ ಮನಸ್ಸು ಸದೃಢವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಿದ ತೃಪ್ತಿ ಲಭಿಸುತ್ತದೆ. ಜಗತ್ತಿನಲ್ಲಿ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದ ದಾನ ರಕ್ತದಾನ. ಆದ್ದರಿಂದ ಎಲ್ಲಾ ಯುವಕರು ಮೂರು ತಿಂಗಳಿಗೆ ಒಮ್ಮೆಯಾದರೂ ರಕ್ತದಾನ ಮಾಡುವುದರ ಮುಖಾಂತರ ರಕ್ತದ ಕೊರತೆಯನ್ನು ನೀಗಿಸೋಣ ಎಂದು ಕರೆ ನೀಡಿದರು.

World Cancer Day ನೆಹರು ರಸ್ತೆ ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್.ಎಂ.ಆರ್ ಮಾತನಾಡಿ, ಮುಂದಿನ ದಿನಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯವಾಗಿ ಬೇಕಾಗಿರುವ ಜೀವಾಮೃತ ರಕ್ತವನ್ನು ದಾನಿಗಳ ಮುಖಾಂತರವೇ ಪಡೆಯಬೇಕಾಗಿದ್ದು, ಇದರ ಮಹತ್ವವನ್ನು ಅರಿತು ರಕ್ತದಾನಕ್ಕೆ ಹೆಚ್ಚು ಒತ್ತು ನೀಡಬೇಕೆಂದು ನುಡಿದರು.

ನಿರ್ದೇಶಕರಾದ ಆರ್.ಗಿರೀಶ್ ಮಾತನಾಡಿ, ರಕ್ತದಾನ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ಇತ್ತೀಚಿನ ವರದಿಯ ಪ್ರಕಾರ ರಕ್ತದಾನಿಗಳಿಗೆ ಹೃದಯದ ಸಮಸ್ಯೆ ಕಡಿಮೆ ಎಂದು ನುಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ
ಜಿ.ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಕೊರತೆ ತುಂಬಾ ಇದೆ. ಇತ್ತೀಚಿಗೆ ಕ್ಯಾನ್ಸರ್ ಹಾಗೂ ಅನೇಕ ಬಗೆಯ ಕಾಯಿಲೆಗಳಿಗೆ ಆ ಸಮಯದಲ್ಲಿ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಇಂತಹ ಕಾರ್ಯಕ್ರಮಗಳು ನಿಜಕ್ಕೂ ಮನುಕುಲದ ಸೇವೆಯಾಗಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವರ್ತಕರು, ಉದ್ಯಮಿಗಳು ರಕ್ತದಾನ ಮಾಡುವುದರ ಮುಖಾಂತರ ಜನತೆಗೆ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ರಕ್ತದಾನಿ ದಿನಕರ್, ಮಧುಸೂದನ್ ಹಾಗೂ ವರ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...