Madhu Bangarappa ಗ್ರಾಮೀಣ ಪ್ರದೇಶಗಳಲ್ಲಿನ ರೈತರು ತಮ್ಮ ಚಟುವಟಿಕೆಗಳಿಗಾಗಿ ಕೆರೆಗಳಿಂದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಲ್ಲಿ ಕಂದಾಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಹಾಗೂ ಯಾವುದೇ ಧನ ಭರಿಸದೆ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಲ್ಲಿ ನಿಯಮಾನುಸಾರ ಕಠಿಣ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಪರೀಕ್ಷೆಗಳನ್ನು ನಿಯಮಾನಸಾರ ಕಟ್ನೆಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನು ತಿರಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.
Madhu Bangarappa ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು hಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹ್ ಅಹವಾಲುಗಳನ್ನು ಸ್ವೀಕರಿಸಿದರು