Monday, February 24, 2025
Monday, February 24, 2025

Madhu Bangarappa ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಸಚಿವ ಎಸ್. ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.

Madhu Bangarappa ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...