Akashvani Bhadravathi ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಶ್ಟತೆಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವರಾದ ಡಾ. ಶ್ರೀಕಂಠ ಕೂಡಿಗೆ ಅವರು ಹೇಳಿದರು. ಅವರು ಆಕಾಶವಾಣಿ ಭದ್ರಾವತಿ ಕೇಂದ್ರಕ್ಕೆ ೬೦ ವರ್ಷ ತುಂಬಿದ ಹಿನ್ನಲೆಯಲ್ಲಿ ಆಕಾಶವಾಣಿ ಆವರಣದಲ್ಲಿ ಹಮ್ಮಿಕೊಂಡ ವಜ್ರಮಹೋತ್ಸದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ೧೯೬೫ರಲ್ಲಿ ಆರಂಭಗೊಂಡ ಆಕಾಶವಾಣಿ ಅಂದಿನಿಂದಲೂ ಇಂದಿನವರೆಗೆ ಹಲವು ನಿರ್ದೇಶಕರು ಹಾಗು ಸಿಬ್ಬಂದಿ ತಮ್ಮದೆ ಆದ ಕೊಡುಗೆಯನ್ನ ನೀಡಿದ್ದಾರೆ ಎಂದು ಹೇಳಿದರು. ಎಸ್.ಆರ್.ಭಟ್ ಅವರ ಕಲ್ಪನೆಯ ಹಲವು ವಿಶೇಷ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇಶವಿದೇಶಗಳಲ್ಲಿ ಭದ್ರಾವತಿ ಆಕಾಶವಾಣಿ ಕಾರ್ಯಕ್ರಮಗಳ ಕಂಪು ಪಸರಿಸಿವೆ ಎಂದರು. Akashvani Bhadravathi ನಂತರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಕೆ.ಸಿ.ಶಶಿಧರ್ ರವರು ಮಾತನಾಡಿ ದೇಶದಲ್ಲಿ ಕೃಷಿಗೆ ಸಂಬಂಧಿಸಿದಂತೆ ರೈತ ಬಂಧುಗಳಿಗೆ ಉಪಯುಕ್ತ ಮಾಹಿತಿಯನ್ನ ನೀಡಿ ಸ್ವಾವಲಂಭನೆ ಬದುಕಿಗೆ ಬಹುದೊಡ್ಡ ಕೊಡುಗೆ ಆಕಾಶವಾಣಿ ನೀಡಿದೆ ಎಂದರು. ಕುವೆಂಪು ವಿಶ್ವವಿದ್ಯಾಲಯದ ಉಪಕುಲಸಚಿವರಾದ ಡಾ.ಕೆ.ಆರ್.ಮಂಜುನಾಥ್ ಅವರು ಮಾತನಾಡಿ ಎಲೆಮರೆಕಾಯಿಯಂತಿರುವ ಎಷ್ಟೋ ಪ್ರತಿಭೆಗಳಿಗೆ ಆಕಾಶವಾಣಿಯು ವೇದಿಕೆಯನ್ನು ಕೊಟ್ಟು ರಾಜ್ಯ ಮತ್ತು ರಾಷ್ಟ್ರಮಟ್ಟದದಲ್ಲಿ ಗುರುತಿಸುವುಕೊಳ್ಳುವದರಲ್ಲಿ ಬಹು ದೊಡ್ಡ ಕೊಡುಗೆಯನ್ನು ನೀಡಿದೆ ಎಂದರು. ಇನ್ನು ಕೆಲವೇ ದಿನಗಳಲ್ಲಿ ಆಕಾಶವಾಣಿಯ ಪ್ರಸಾರಣ ಸಾಮರ್ಥ್ಯ, ಶಿವಮೊಗ್ಗದಲ್ಲಿ ಸ್ಥಾಪನೆಯಾಗುತ್ತಿರುವ ೧೦ ಕಿಲೊವ್ಯಾಟ್ ಸಾಮರ್ಥ್ಯದ ಎಫ್ ಎಂ ಟ್ರಾನ್ಸ್ಮಿಟ್ಟರ್ ನಿಂದಾಗಿ ಹೆಚ್ಚು ವ್ಯಾಪ್ತಿಯನ್ನು ತಲುಪಲು ಅವಿರತವಾಗಿ ಶ್ರಮಿಸುತ್ತಿರುವ ಶಿವಮೊಗ್ಗದ ಸಂಸದರಾದ ಬಿ.ವೈ.ರಾಘವೇಂದ್ರರವರನ್ನು ನೆನಪಿಸಿಕೊಳ್ಳುತ್ತ, ಅವರ ಪಾತ್ರ ದೊಡ್ಡದು ಎಂದರು. ಈ ಅಂತದಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಆಕಾಶವಾಣಿ ಭದ್ರಾವತಿ ಮತ್ತು ಚಿತ್ರದುರ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಸುಬ್ರಾಯ ಆರ್ ಭಟ್ ರವರು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಸಿದ್ದೇಶ್, ಶಿವಮೊಗ್ಗದ ಛೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಬಿ.ಗೋಪಿನಾಥ್, ಪಿ.ಇ.ಎಸ್ ಸಮೂಹ ಸಂಸ್ಥೆಯ ಮುಖ್ಯ ಸಂಯೋಜಕರಾದ ಡಾ. ನಾಗರಾಜ್ ಆರ್, ಶಿವಮೊಗ್ಗದ ಐ.ಎಂ.ಎ ಕಾರ್ಯದರ್ಶಿಗಳಾದ ಹಾಗು ಸುಬ್ಬಯ್ಯ ಸಮೂಹ ಸಂಸ್ಥೆಯ ಸಿ.ಇ.ಒ ಡಾ. ವಿನಯ ಶ್ರೀನಿವಾಸ್ ಉಪಸ್ಥಿತರಿದ್ದರು. ನಂತರ ಕಥಾ ಸ್ವರ್ಧೆಯಲ್ಲಿ ವಿಜೇತರಾದ ದೀಪ್ತಿ ಭದ್ರಾವತಿ, ಶ್ರೇಯ ಕೆ ಎಂ ಹಾಗು ಸಂತೆಬೆನ್ನೂರು ಫೈಜ್‌ನಟ್ರಾಜ್ ಮತ್ತು ಪಾಕಸ್ಪರ್ಧೆಯಲ್ಲಿ ವಿಜೇತರಾದ ಗಿರಿಜಾ ಹೆಗಡೆ, ಎಂ.ಎನ್.ಸುಶೀಲ, ಡಾ. ಮೈತ್ರೇಯಿ ಅವರಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್.ಚಾಂದ್‌ವಾನಿ, ಮತ್ತು ಕೆ.ಎಸ್. ಸುರೇಶ್, ಮುಖ್ಯಮಹಾಪ್ರಭಂಧಕರು ಸ್ತಾವರ, ಎಲ್.ಪ್ರವೀಣ್‌ಕುಮಾರ್ ಮಹಾಪ್ರಭಂಧಕರು, ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಾನವ ಸಂಪನ್ಮೂಲ, ಮುತ್ತಣ್ಣ ಸುಬ್ಬರಾವ್, ಮಹಾಪ್ರಭಂಧಕರು, ಪರಿಸರ ವಿಭಾಗ ಹಾಗು ವಿಕಾಸ್ ಬಸೀರ್ ಸಹಾಯಕ ಮಹಾಪ್ರಭಂಧಕರು, ಮತ್ತು ಇತರ ಸಿಬ್ಬಂದಿವರ್ಗದವರು, ೬೦ವರ್ಷದ ಸವಿನೆನಪಿಗೆ ೬೦ ಸಸಿಗಳನ್ನು ವಿತರಿಸಿದರು. ಆಕಾಶವಾಣಿ ಕೇಂದ್ರದಲ್ಲಿ ನಿವೃತ್ತ ಹೊಂದಿದವರಿಗೆ ಮತ್ತು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂಧಿವರ್ಗದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ ಕೇಳುಗರು ತಮ್ಮ ಅಭಿಪ್ರಾಯಗಳನ್ನು ಹಚ್ಚಿಕೊಂಡರು. ಕಾರ್ಯಕ್ರಮವನ್ನು ಶೋಭ ಮತ್ತು ತಂಡದವರಿಂದ ಸ್ವಾಗತಗೀತೆಯೊಂದಿಗೆ ಆರಂಭಿಸಿದರೆ ಕಾರ್ಯಕ್ರಮ ಅಧಿಕಾರಿ ಎಸ್.ಎಲ್.ರಮೇಶ್‌ಪ್ರಸಾದ್ ಅವರು ಎಲ್ಲರನ್ನು ಸ್ವಾಗತಿಸಿದರು. ಡಾ.ಗಣೇಶ್ ಆರ್ ಕೆಂಚನಾಳ ಅವರು ಪ್ರಾಸ್ತವಿಕ ನುಡಿಗಳನ್ನಾಡಿದರೆ ಶಕೀಲ್ ಅಹ್ಮದ್ ಮತ್ತು ಮೀನ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಕಾಶವಾಣಿಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
