Monday, December 15, 2025
Monday, December 15, 2025

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Date:

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು , ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ , ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ,ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.
ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು , ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು.ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.

ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ

Guarantee scheme ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.
ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯ ಮೆಚ್ಚಿದರು. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು. ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ (SDG) ಡ್ಯಾಶ್‌ಬೋರ್ಡ್ ವೀಕ್ಷಿಸಿ ಶ್ಲಾಘಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...