Monday, February 24, 2025
Monday, February 24, 2025

Aryabhata Abacus ಗಣಿತದ ಕಲಿಕೆ ಕಷ್ಟಕರವೇ ಅಲ್ಲ- ಡಾ.ಎಚ್.ಬಿ.ಮಂಜುನಾಥ್

Date:

Aryabhata Abacus ದೇಹದ ಆಂತರಿಕ ಕ್ರಿಯೆಗಳಿಂದ ಮೊದಲ್ಗೊಂಡು ಹೊರಜಗತ್ತಿನ ಎಲ್ಲ ವ್ಯವಹಾರಗಳಲ್ಲೂ ಗಣಿತವು ಹಾಸು ಹೊಕ್ಕಾಗಿದ್ದು ಗಣಿತದ ಕಲಿಕೆ ಕಷ್ಟಕರ ವಿದ್ಯೆ ಅಲ್ಲ ಎಂದು ಹಿರಿಯಪತ್ರಕರ್ತ ಡಾ. ಹೆಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.

ಆರ್ಯಭಟ ಅಬ್ಯಾಕಸ್ ಮತ್ತು ವೇದಿಕ್ ಮ್ಯಾಥ್ಸ್ ನ ನಾಲ್ಕನೇ ಅಂತರ ಕೇಂದ್ರ ಸ್ಪರ್ಧಾ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಸಣ್ಣ ಸಣ್ಣ ಲೆಕ್ಕಗಳಿಗೂ ಕ್ಯಾಲ್ಕುಲೇಟರ್ ಹಾಗೂ ಮೊಬೈಲ್ ಗಳನ್ನು ಬಳಸುತ್ತಾ ಇಂದಿನ ಪೀಳಿಗೆ ಸ್ವಸಾಮರ್ಥ್ಯದ ಗಣಿತವನ್ನು ಮರೆಯುತ್ತಿದ್ದಾರೆ, ಉಪಕರಣಗಳಿಗಿಂತಲೂ ವೇಗವಾಗಿ ಸ್ವತಃ ಗಣಿತ ಮಾಡಬಹುದಾದ ಅಬ್ಯಾಕಸ್ ಹಾಗೂ ವೇದಿಕ್ ಗಣಿತಗಳ ಕಲಿಕೆ ಒಳ್ಳೆಯದು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟಿನ ಗೌರವ ಕಾರ್ಯದರ್ಶಿ ಸಂಗಮೇಶ್ವರ ಗೌಡ್ರು ಅಬಾಕಸ್ ಕಲಿಯುವುದರಿಂದ ಮಕ್ಕಳಲ್ಲಿ ಗಣಿತದ ಬುದ್ಧಿ ಚುರುಕಾಗುತ್ತದೆ, ಸಾಧನೆಗೆ ಇದು ಅನುಕೂಲ ಎಂದರು.

ಮತ್ತೋರ್ವ ಮುಖ್ಯ ಅತಿಥಿ ಡಾ ಹರ್ಷ ಬಾಬಾಜಿ ಮಾತನಾಡಿ ಮಕ್ಕಳ ಶಿಕ್ಷಣದಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರವೂ ಮಹತ್ತರವಾಗಿದೆ ಎಂದರು. ಆರ್ಯಭಟ ಅಬ್ಯಾಕಸ್ಸಿನ ರಾಜೇಶ್ವರಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ನಾಗರತ್ನ ಚಂದ್ರಮೌಳಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕು.ಸ್ತುತಿ ಪ್ರಾರ್ಥನಾ ಗೀತೆ ಹಾಡಿದರೆ ಮಕ್ಕಳ ಅಬ್ಯಾಕಸ್ ಪ್ರತಿಭಾ ಪ್ರಾತ್ಯಕ್ಷಿಕೆಯನ್ನು ಜಯ ಶ್ರಾವಣಿ ನಿರ್ವಹಿಸಿದರು.

Aryabhata Abacus ನವ್ಯಾ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ವಂದನೆಗಳನ್ನು ಕು. ಶುದ್ಧಿ ಸಮರ್ಪಿಸಿದರು. ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯ ಪ್ರಾಂಗಣದಲ್ಲಿ ಕಾರ್ಯಕ್ರಮ ನೆರವೇರಿತು. ವಿಜೇತರಿಗೆ ಬಹುಮಾನಗಳನ್ನೂ ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...