Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕೇಂದ್ರ ಬಜೆಟ್ ವಿಶ್ಲೇಷಣೆ ಹಾಗೂ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಅವರು ಸಂಘದ ಕಚೇರಿಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಮಾಜಿ ಅಧ್ಯಕ್ಷರ ಜತೆ ವಾಣಿಜ್ಯ ಮತ್ತು ಕೈಗಾರಿಕಾ ಸಮಸ್ಯೆಗಳು, ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಕೇಂದ್ರ ಮುಂಗಡ ಪತ್ರದ ಕುರಿತು ಸಮಾಲೋಚನೆ ನಡೆಸಿದರು.
Chamber Of Commerce Shivamogga ವಾಣಿಜ್ಯ ಮತ್ತು ಕೈಗಾರಿಕಾ ಸಂಘ ನಡೆಸುತ್ತಿರುವ ಕಾರ್ಯಕ್ರಮಗಳ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಶ್ವನಾಥ್ ಭಟ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಸುಕುಮಾರ್, ಖಜಾಂಚಿ ಆರ್.ಮನೋಹರ್, ಮಾಜಿ ಅಧ್ಯಕ್ಷರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಎನ್.ಗೋಪಿನಾಥ್ ಹಾಗೂ ನಿರ್ದೇಶಕರಾದ ಗಣೇಶ ಎಂ.ಅAಗಡಿ, ಶರತ್, ಎಸ್.ಪಿ.ಶಂಕರ್, ವಿ.ಕೆ.ಜೈನ್, ಲಕ್ಷಿö್ಮÃ ಗೋಪಿನಾಥ್, ಬಿ.ಸುರೇಶ್ ಕುಮಾರ್, ಕಾರ್ಯಕಾರಿ ಕಾರ್ಯದರ್ಶಿ ಎಚ್.ಎಚ್.ಕಮಲಾಕ್ಷರಪ್ಪ, ಬಿಜೆಪಿ ಪ್ರಮುಖರಾದ ಎಸ್.ದತ್ತಾತ್ರಿ, ಎನ್.ಡಿ.ಸತೀಶ್, ಸುರೇಂದ್ರ ಕಟ್ಟೆ ಹಾಗೂ ಇತರರು ಭಾಗವಹಿಸಿದ್ದರು.
Chamber Of Commerce Shivamogga ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನ
Date: