Thursday, March 19, 2026
Thursday, March 19, 2026

Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ‌ ಖಾತಾಪಡೆಯಲು ಅವಕಾಶ

Date:

Shimoga News ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಆನವಟ್ಟಿ ಪಟ್ಟಣ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ‌ ಖಾತಾಪಡೆಯಲು ಅವಕಾಶ ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...